ಬೆಂಗಳೂರು: ನಿಂತಿದ್ದ ಕ್ಯಾಂಟರ್‌ಗೆ ಟಾಟಾ ಏಸ್ ಡಿಕ್ಕಿಯಾಗಿ (Accident) ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಆರ್ ಪುರಂನ (K.R Puram) ಮೇಡಹಳ್ಳಿ ಮೇಲ್ ಸೇತುವೆ ಮೇಲೆ ನಡೆದಿದೆ.
ಮೃತರನ್ನು ವೈಟ್ ಫೀಲ್ಡ್ ನಿವಾಸಿಗಳಾದ ಮಣಿಕಂಠ, ಸುರೇಶ್, ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಕೋಲಾರದಿಂದ ಬೆಂಗಳೂರಿಗೆ ಆಲೂಗಡ್ಡೆ ತುಂಬಿಸಿಕೊಂಡು ಬಂದಿದ್ದ ಕ್ಯಾಂಟರ್ ವಾಹನ ಮೇಲ್ ಸೇತುವೆ ಮೇಲೆ ಪಂಚರ್ ಆಗಿತ್ತು. ಚಾಲಕ ಟೈರ್ ಬದಲಿಸುತ್ತಿದ್ದರು. ಈ ವೇಳೆ ಹಿಂಬದಿಯಿಂದ ಟಾಟಾ ಏಸ್ ಡಿಕ್ಕಿಯಾಗಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಡಿಕ್ಕಿ ರಭಸಕ್ಕೆ ವಾಹನದ ಮುಂಭಾಗ ಜಖಂಗೊಂಡಿದ್ದು, ದೇಹಗಳು ಛಿದ್ರವಾಗಿವೆ. ಇದನ್ನೂ ಓದಿ: ಡಿಆರ್‌ಐ ಅಧಿಕಾರಿಗಳ ಭರ್ಜರಿ ಬೇಟೆ – ಬೆಂಗಳೂರಲ್ಲಿ 9 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ
ಸ್ಥಳಕ್ಕೆ ಕೆಆರ್ ಪುರಂ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಕೆಆರ್ ಪುರಂ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಮೇಲ್ನೋಟಕ್ಕೆ ಈಚರ್ ವಾಹನ ಚಾಲಕನ ನಿರ್ಲಕ್ಷ್ಯ ಕಂಡು ಬಂದಿದೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಉತ್ತರ ವಿಭಾಗ ಡಿಸಿಪಿ ನೇಮಗೌಡ ಹೇಳಿದ್ದಾರೆ. ಇದನ್ನೂ ಓದಿ: ಜೂಜಾಡುವ ವೇಳೆ ಪೊಲೀಸರ ದಾಳಿ – ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವು

