ಟೈರ್ ಸ್ಫೋಟಗೊಂಡು ಮುಗುಚಿ ಬಿದ್ದ ಟವೇರಾ ವಾಹನ – ಓರ್ವ ಸಾವು, 12 ಜನರಿಗೆ ಗಾಯ

Public TV
0 Min Read

ತುಮಕೂರು: ಟವೇರಾ ವಾಹನದ ಟೈರ್ ಸ್ಫೋಟಗೊಂಡ ಪರಿಣಾಮ ಓರ್ವ ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆ ಬಳಿಯ ಹೆದ್ದಾರಿಯಲ್ಲಿ ನಡೆದಿದೆ.

ಮಾಣಿಕ್ಯ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ. ವಾಹನದಲ್ಲಿ ಇದ್ದವರು ಬೆಂಗಳೂರು ಮೂಲದವರಾಗಿದ್ದು ಮುರುಡೇಶ್ವರ ಪ್ರವಾಸ ಮುಗಿಸಿ ದಾವಣಗೆರೆ ಮಾರ್ಗದ ಮೂಲಕ ವಾಪಸ್ಸಾಗುತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಗಾಯಾಳುಗಳ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article
Leave a Comment

Leave a Reply

Your email address will not be published. Required fields are marked *