ಹಾಸನ | ಹೃದಯಾಘಾತಕ್ಕೆ ಶಿಕ್ಷಕಿ ಸೇರಿ ಇಬ್ಬರು ಬಲಿ

1 Min Read

ಹಾಸನ: ಹಠಾತ್‌ ಹೃದಯಾಘಾತಕ್ಕೆ (Heart Attack) ಶಿಕ್ಷಕಿ ಸೇರಿ ಇಬ್ಬರು ಬಲಿಯಾಗಿರುವ ಘಟನೆ ಹಾಸನ (Hassan) ಜಿಲ್ಲೆಯಲ್ಲಿ ನಡೆದಿದೆ.

ಅರಕಲಗೂಡು ತಾಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ (58) ಸಾವನ್ನಪ್ಪಿದ ಶಿಕ್ಷಕಿ. ಇದೇ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅವರು ಶಿಕ್ಷಕಿಯಾಗಿದ್ದರು. ಅವರು ನಿವೃತ್ತಿಯಾಗಲು ಇನ್ನೆರಡು ವರ್ಷ ಮಾತ್ರ ಬಾಕಿಯಿತ್ತು. ಇಂದು (ಡಿ.20) ಮುಂಜಾನೆ ಮನೆಯಲ್ಲಿ ಮಲಗಿದ್ದ ವೇಳೆ ಹಠಾತ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದನ್ನೂ ಓದಿ: ನಡುರಸ್ತೆಯಲ್ಲೇ ಹೃದಯಾಘಾತ; ಜೀವ ಉಳಿಸಲು ಅಂಗಲಾಚಿದರೂ ನೆರವಿಗೆ ಬಾರದ ಜನ – ರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ವ್ಯಕ್ತಿ

ಇನ್ನೊಂದೆಡೆ ಹೊಳೆನರಸೀಪುರದ (Holenarasipura) ಹಳ್ಳಿಮೈಸೂರು ಹೋಬಳಿ ಗುಲಗಂಜಿಹಳ್ಳಿ ಗ್ರಾಮದಲ್ಲಿ ಯುವಕನೊಬ್ಬ ಹಠಾತ್ ಹೃದಯಾಘಾತದಿಂದ ನಿಧನನಾಗಿದ್ದಾನೆ. ಮೃತರನ್ನು ಪರಮೇಶ್ (35) ಎಂದು ಗುರುತಿಸಲಾಗಿದೆ. ಅವರು ಪಟ್ಟಣದ ಹೋಟೆಲ್‍ನಲ್ಲಿ ಕೆಲಸ ಮಾಡಿಕೊಂಡಿದ್ದರು.

ಮಧ್ಯರಾತ್ರಿ 2 ಗಂಟೆ ಸಮಯದಲ್ಲಿ ಮಲಗಿದಲ್ಲಿಯೇ ಅವರಿಗೆ ಹಠಾತ್ ಹೃದಯಘಾತವಾಗಿ, ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯಲ್ಲಿ ಮತ್ತೆ ಹೃದಯಾಘಾತ ಪ್ರಕರಣಗಳು ಮರುಕಳಿಸಿದ್ದು ಜಿಲ್ಲೆಯ ಜನರಲ್ಲಿ ಆತಂಕ ಉಂಟು ಮಾಡಿದೆ. ಇದನ್ನೂ ಓದಿ: ಶಿವಮೊಗ್ಗ ಮೂಲದ ಬಿ.ಕಾಂ ವಿದ್ಯಾರ್ಥಿನಿ ಚಿಕ್ಕಮಗಳೂರಲ್ಲಿ ಹೃದಯಾಘಾತಕ್ಕೆ ಬಲಿ

Share This Article