ಬೆಂಗಳೂರು: ಡಿಸೆಂಬರ್ 7ರಂದು ಶಿಕ್ಷಕರ ಅರ್ಹತಾ ಪರೀಕ್ಷೆ (TET) ನಡೆಸಲು ಶಿಕ್ಷಣ ಇಲಾಖೆ (Education Department) ದಿನಾಂಕ ಘೋಷಣೆ ಮಾಡಿದೆ.
ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ಡಿ.7ಕ್ಕೆ ಟಿಇಟಿ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಿದ್ದು, ಡಿ.31ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕುರಿತ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಅಭ್ಯರ್ಥಿಗಳು ಅ.23ರಿಂದ ನ.09ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಇದನ್ನೂ ಓದಿ: ದೆಹಲಿಯಲ್ಲಿ ರಾಜ್ಯಸಭಾ ಸಂಸದರಿಗೆ ಹಂಚಲಾಗಿದ್ದ ಅಪಾರ್ಟ್‌ಮೆಂಟ್‌ಗಳಲ್ಲಿ ಭಾರಿ ಬೆಂಕಿ ಅವಘಡ
ಕಲ್ಯಾಣ ಕರ್ನಾಟಕ ಪ್ರದೇಶದ ಮತ್ತು ಉಳಿದ ಶಿಕ್ಷಕರ ಹುದ್ದೆಗಳ ಭರ್ತಿಗೂ ಸಿಇಟಿ ಪರೀಕ್ಷೆಯ ಮೂಲಕ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಮಾಹಿತಿ ನೀಡಿದೆ.