ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣದಲ್ಲಿ ಓರ್ವ ಶಿಕ್ಷಕಿ ಹಾಗೂ ಓರ್ವ ಹೆಡ್ ಕಾನ್ಸ್‌ಟೇಬಲ್ (Head Constable) ಹೃದಯಾಘಾತಕ್ಕೆ (Heart Attack) ಬಲಿಯಾಗಿರುವ ಘಟನೆ ನಡೆದಿದೆ.
ನೆಲಮಂಗಲ:
ನೆಲಮಂಗಲದ ಬಸವಣ್ಣ ದೇವರ ಮಠದ ಶಿಕ್ಷಕಿ (Teacher) ಸುಲೋಚನಾ (49) ಮನೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ನೆಲಮಂಗಲದ ಭಕ್ತನಪಾಳ್ಯದ ತಮ್ಮ ಮನಯಲ್ಲಿದ್ದಾಗ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿದೆ. ಅಲ್ಲೇ ಕುಸಿದುಬಿದ್ದು ಶಿಕ್ಷಕಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಕೆಜಿಎಫ್ ಬಾಬುಗೆ ಆರ್‌ಟಿಓ ಶಾಕ್ – ಬಿಗ್ ಬಿ, ಆಮೀರ್ ಖಾನ್‌ರಿಂದ ಖರೀದಿಸಿದ್ದ ಐಷಾರಾಮಿ ಕಾರು ಜಪ್ತಿ?
ಬೆಂಗಳೂರು:
ಮತ್ತೊಂದು ಪ್ರಕರಣದಲ್ಲಿ ಬೇಗೂರು ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿದ್ದ ನಿಜಾಮುದ್ದಿನ್ (44) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್ – ಇಂದು ಮತ್ತೆ ವಿಚಾರಣೆ, FIR ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಬೈರತಿ ಬಸವರಾಜ್
ಬೆಂಗಳೂರು ನಗರದ ಆಡುಗೋಡಿ ಪೊಲೀಸ್ ಕ್ವಾಟ್ರಸ್‌ನಲ್ಲಿ ವಾಸವಿದ್ದ ನಿಜಾಮುದ್ದೀನ್‌ಗೆ ಇಂದು ಮುಂಜಾನೆ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಬಾಹ್ಯಾಕಾಶದಲ್ಲಿ 18 ದಿನ – ಭೂಮಿಯಲ್ಲಿ ಮತ್ತೆ ನಡೆಯುವುದನ್ನ ಕಲಿಯುತ್ತಿದ್ದಾರೆ ಶುಭಾಂಶು ಶುಕ್ಲಾ