ಬೆಳಗಾವಿ: ಸಾಮಾಜಿಕ ಜಾಲತಾಣದಲ್ಲಿ ದೇಶದ್ರೋಹಿ ಪೋಸ್ಟ್ ಹಾಕಿದ ಶಿಕ್ಷಕಿ ಮನೆಗೆ ಕಲ್ಲು ತೂರಿ, ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಕಡಬಿ ಶಿವಾಪೂರ ಗ್ರಾಮದಲ್ಲಿ ನಡೆದಿದೆ.
ಜಿಲೇಕಾ ಮಮದಾಪುರ್ ದೇಶದ್ರೋಹಿ ಪೋಸ್ಟ್ ಹಾಕಿದವಳಾಗಿದ್ದು, ಈಕೆ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾಳೆ. ಈಕೆ ಫೇಸ್‍ಬುಕ್ ಹಾಗೂ ವಾಟ್ಸಪ್‍ಗಳಲ್ಲಿ ಪಾಕಿಸ್ತಾನ್ ಕಿ ಜೈ ಎಂದು ಪೋಸ್ಟ್ ಮಾಡಿದ್ದಾಳೆ. ಅಷ್ಟೇ ಅಲ್ಲದೇ ವಾಟ್ಸಪ್ ಡಿಪಿಯಲ್ಲೂ ಇದೇ ಫೋಟೋ ಹಾಕಿಕೊಂಡಿದ್ದಾಳೆ.
ಜಿಲೇಕಾ ಪೋಸ್ಟ್ ಗಮಿಸಿದ ಸ್ಥಳೀಯರು ರೊಚ್ಚಿಗೆದ್ದು, ಆಕೆಯ ಕಡಬಿ-ಶಿವಾಪುರ ಗ್ರಾಮದಲ್ಲಿರುವ ಮನೆ ಬಳಿಕ ಕಲ್ಲು ತೂರಾಟ ಮಾಡಿದ್ದಾರೆ. ಅಷ್ಟಕ್ಕೆ ಸುಮ್ಮನಾಗದ ಅವರು ಮನೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಮುರಗೋಡ ಪೊಲೀಸರು ದೌಡಾಯಿಸಿ ಶಿಕ್ಷಕಿಯನ್ನು ವಶಕ್ಕೆ ಪಡೆದಿದ್ದಾರೆ.
ಇತ್ತ ಮನೆಗೆ ಬೆಂಕಿ ಹಚ್ಚಿದ 6 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನ ಖಂಡಿಸಿ ಇಂದು ಜಿಲ್ಲೆಯ ಸವದತ್ತಿ ತಾಲೂಕಿನ ಮುರಗೋಡ ಹೋಬಳಿ ಬಂದ್‍ಗೆ ಕರೆ ನೀಡಲಾಗಿದೆ. ಯುವತಿ ಮೇಲೆ ಕ್ರಮ ತೆಗೆದುಕೊಳ್ಳಬೇಕು ಹಾಗೂ ಕೂಡಲೇ ವಶಕ್ಕೆ ಪಡೆದಿರುವವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸ್ಥಳೀಯ ಹಾಗೂ ಸಾರ್ವಜನಿಕರು ಬಂದ್‍ಗೆ ಕರೆ ನೀಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv