ಏರ್ ಇಂಡಿಯಾ ವಿಮಾನ ದುರಂತ – ಕಪ್ಪು ಪಟ್ಟಿ ಧರಿಸಿ ಟೀಂ ಇಂಡಿಯಾ ಆಟಗಾರರಿಂದ ಮೌನಾಚರಣೆ

Public TV
2 Min Read
– WTC ಫೈನಲ್‌ನ 3ನೇ ದಿನದ ಆರಂಭಕ್ಕೂ ಮುನ್ನ ಮೌನಾಚರಿಸಿದ ಆಟಗಾರರು

ಲಂಡನ್: ಬೆಕೆನ್‌ಹ್ಯಾಮ್‌ನಲ್ಲಿ (Beckenham) ನಡೆಯುತ್ತಿರುವ ಇಂಟ್ರಾ-ಸ್ಕ್ವಾಡ್ ಪಂದ್ಯದಲ್ಲಿ ಭಾಗಿಯಾಗಿರುವ ಟೀಂ ಇಂಡಿಯಾ (Team India) ಆಟಗಾರರು ಪಂದ್ಯದ ಆರಂಭಕ್ಕೂ ಮುನ್ನ ಕಪ್ಪು ಪಟ್ಟಿ ಧರಿಸಿ ಮೌನಾಚರಣೆ ಮಾಡಿ, ಅಹಮದಾಬಾದ್ ವಿಮಾನ ದುರಂತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದರು.

ಆಗ್ನೇಯ ಲಂಡನ್‌ನ ಬೆಕೆನ್‌ಹ್ಯಾಮ್‌ನಲ್ಲಿ ಇಂಟ್ರಾ-ಸ್ಕ್ವಾಡ್ ಪಂದ್ಯ ನಡೆಯುತ್ತಿದ್ದು, ಟೀಂ ಇಂಡಿಯಾ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿ ಭಾಗಿಯಾಗಿದ್ದಾರೆ. ಅಹಮದಾಬಾದ್ ವಿಮಾನ ದುರಂತದ ಹಿನ್ನೆಲೆ ಪಂದ್ಯದ ಆರಂಭಕ್ಕೂ ಮುನ್ನ ತೋಳಿಗೆ ಕಪ್ಪು ಪಟ್ಟಿ ಧರಿಸಿ ಒಂದು ನಿಮಿಷ ಮೌನಾಚರಣೆ ಮಾಡಿದರು. ಈ ಮೂಲಕ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದರು.ಇದನ್ನೂ ಓದಿ: ವಿಮಾನ ದುರಂತ | ನಾನು ನನ್ನ ಪ್ರೀತಿ ಕಳೆದುಕೊಂಡೆ – ಆಸ್ಪತ್ರೆ ಮುಂದೆ ಯುವಕನ ಕಣ್ಣೀರು

ಲಾರ್ಡ್ಸ್‌ನಲ್ಲಿ ಮೌನಾಚರಣೆ:
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ಲಂಡನ್‌ನ ಲಾರ್ಡ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಇಂದು ಮೂರನೇ ದಿನದ ಆರಂಭಕ್ಕೂ ಮುನ್ನ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ಆಟಗಾರರು ಮೌನಾಚರಣೆ ಮಾಡಿದರು.

ಏನಿದು ಘಟನೆ?
ಅಹಮದಾಬಾದ್ ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟ ಏರ್‌ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತು. ಪರಿಣಾಮ ಅಹಮದಾಬಾದ್ ಸಮೀಪದ ಮೇಘನಿ ನಗರದ ಬಿಜೆ ಎಂಬಿಬಿಎಸ್ ಕಾಲೇಜು ಹಾಸ್ಟೆಲ್‌ಗೆ ಡಿಕ್ಕಿ ಹೊಡೆದಿತ್ತು. ವಿಮಾನದಲ್ಲಿ ಪೈಲೆಟ್, ಸಿಬ್ಬಂದಿ ಸೇರಿ ಒಟ್ಟು 242 ಪ್ರಯಾಣಿಕರಿದ್ದರು. ಈ ಪೈಕಿ 241 ಜನ ಸಾವನ್ನಪ್ಪಿದ್ದು, ಓರ್ವ ಪ್ರಯಾಣಿಕ ಪವಾಡ ಸದೃಶ್ಯ ಪಾರಾಗಿದ್ದಾರೆ.ಇದನ್ನೂ ಓದಿ: Photo Gallery: ಅಹಮದಾಬಾದ್‌ನಲ್ಲಿ ವಿಮಾನ ದುರಂತ ನಡೆದ ಸ್ಥಳಕ್ಕೆ ಮೋದಿ ಭೇಟಿ

Share This Article