ಭೋಪಾಲ್: ಮಧ್ಯಪ್ರದೇಶದ (Madhya Pradesh) ಇಂದೋರ್ (Indore) ನಗರದ ಶಾಲೆಯೊಂದರ ಆವರಣದಲ್ಲಿ 13 ವರ್ಷದ ಬಾಲಕನ ಮೇಲೆ ಇಬ್ಬರು ಬಾಲಕರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ದೌರ್ಜನ್ಯ ಎಸಗಿದ 16 ಮತ್ತು 17 ವರ್ಷ ವಯಸ್ಸಿನ ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ದೌರ್ಜನ್ಯಕ್ಕೊಳಗಾದ ಬಾಲಕನ ವೈದ್ಯಕೀಯ ಪರೀಕ್ಷೆ ಮಾಡಿಸಲು ಪೋಷಕರು ಹಾಗೂ ಪೊಲೀಸರು ಆಸ್ಪತ್ರೆಯಿಂದ ಆಸ್ಪತ್ರೆಗೆ ಸುತ್ತಾಡಿದ್ದಾರೆ. ವೈದ್ಯಕೀಯ ಪರೀಕ್ಷೆ ವಿಳಂಬದ ಬಗ್ಗೆ ತನಿಖೆಗೆ ಅಧಿಕಾರಿಗಳು ಆದೇಶಿಸಿದ್ದಾರೆ. ಇದನ್ನೂ ಓದಿ: ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್- ಸೂರಜ್ ರೇವಣ್ಣಗೆ ಮೆಡಿಕಲ್ ಟೆಸ್ಟ್
ಶಾಲೆಯ ಆವರಣದಲ್ಲಿ ಮೈದಾನದಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಆರೋಪಿಗಳು ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದಾರೆ. ಅಲ್ಲದೇ ಮೌಖಿಕ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬ ಮೆಕ್ಯಾನಿಕ್ ಎಂದು ತಿಳಿದು ಬಂದಿದೆ. ಇಬ್ಬರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾ ಆಸ್ಪತ್ರೆಯಲ್ಲಿ ಬಾಲಕನಿಗೆ ಸ್ವ್ಯಾಬ್ ಪರೀಕ್ಷೆಗೆ ಕರೆದೊಯ್ಯಲಾಗಿತ್ತು. ಆದರೆ ಆ ಸೌಲಭ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದರಿಂದ ಬೇರೆ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಲಾಯಿತು. ಎಫ್‌ಐಆರ್ ದಾಖಲಾಗಿ 17 ಗಂಟೆಗಳ ಬಳಿಕ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.
ಸಣ್ಣ ಆರೋಗ್ಯ ಕೇಂದ್ರಗಳಲ್ಲಿಯೂ ಸ್ವ್ಯಾಬ್ ಪರೀಕ್ಷಾ ಸೌಲಭ್ಯ ಇರುತ್ತದೆ. ಹೀಗಿದ್ದಾಗ ಏಕೆ ವೈದ್ಯರು ಪರಿಕ್ಷಿಸಿಲ್ಲ ಮತ್ತು ವಿಳಂಬಕ್ಕೆ ಕಾರಣವನ್ನು ಕೇಳಿ ಮೇಲಾಧಿಕಾರಿಗಳು ನೋಟಿಸ್ ನೀಡಿದ್ದಾರೆ. ಇದನ್ನೂ ಓದಿ: ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್- ಸೂರಜ್ ರೇವಣ್ಣಗೆ ನ್ಯಾಯಾಂಗ ಬಂಧನ