ಪ್ರಾದೇಶಿಕ ರಾಜಕೀಯ ಪಕ್ಷಗಳೊಂದಿಗೆ ಸೇರಿ ಬಿಜೆಪಿಯೇತರ ರಂಗ ರೂಪಿಸುತ್ತೇವೆ: ಕೆಸಿಆರ್‌

Public TV
1 Min Read

ರಾಂಚಿ: ದೇಶಕ್ಕೆ ನೂತನ ದಿಕ್ಕನ್ನು ನೀಡಲು ಸಮಾನ ಮನಸ್ಕ ಪಕ್ಷಳೊಂದಿಗೆ ಮಾತುಕತೆ ನಡೆಸುತ್ತಿದ್ದೇನೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾದೇಶಿಕ ರಾಜಕೀಯ ಸಂಘಟನೆಗಳ ಜೊತೆ ಮಾತುಕತೆ ನಡೆಸಿ ಬಿಜೆಪಿಯೇತರ ರಂಗವನ್ನು ರೂಪಿಸುತ್ತೇನೆ ಎಂದು ತಿಳಿಸಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ದೇಶ ಯಾವುದೇ ರೀತಿಯಲ್ಲೂ ಅಭಿವೃದ್ಧಿಯನ್ನು ಹೊಂದಿಲ್ಲ. ಇದರಿಂದಾಗಿ ರಾಷ್ಟ್ರದ ಅಭಿವೃದ್ಧಿಗೆ ಅಗತ್ಯವಾದ ಕ್ರಮ ಜರುಗಿಸುವಲ್ಲಿ ರಾಜಕೀಯ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಿದರು.

ದೇಶವನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯಲು ಪ್ರಾಮಾಣಿಕ ಪ್ರಯತ್ನವನ್ನು ನಡೆಸುತ್ತೇವೆ. ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇದನ್ನು ಕೆಲವರು ಮೂರನೇ ರಂಗವೆಂದು ಇನ್ನೂ ಕೆಲವರು ನಾಲ್ಕನೇ ರಂಗವೆಂದು ಕರೆಯುತ್ತಿದ್ದಾರೆ. ಆದರೆ ಇದು ಯಾವ ಆಕಾರವನ್ನು ತೆಗೆದುಕೊಳ್ಳುತ್ತವೆ ಎಂದು ನಂತರ ನಿಮಗೆ ತಿಳಿಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಬುದ್ಧಿಮಾಂದ್ಯನ ಮೇಲೆ ಮನಬಂದಂತೆ ಥಳಿಸಿದ PSI

ಈ ಬಗ್ಗೆ ಶೀಘ್ರವೇ ನಿಮಗೆ ಅರ್ಥವಾಗುತ್ತದೆ. ಈಗಲೇ ತೀರ್ಮಾನಕ್ಕೆ ಬರಬೇಡಿ ಎಂದ ಅವರು, ಜಾರ್ಖಂಡ್‌ ಮುಖ್ಯಮಂತ್ರಿ ಮತ್ತು ಜೆಎಂಎಂ ನಾಯಕ ಹೇಮಂತ್ ಸೊರೆನ್ ಅವರೊಂದಿಗೆ ರಾಜಕೀಯ ಚರ್ಚೆ ನಡೆಸಿದ್ದೇನೆ ಎಂದು ಈ ವೇಳೆ ತಿಳಿಸಿದರು. ಇದನ್ನೂ ಓದಿ: ಉಕ್ರೇನ್‍ನಿಂದ ಹಿಂತಿರುಗಿದ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಅನುಮತಿ ನೀಡಿ – ಪ್ರಧಾನಿಗೆ ಐಎಂಎ ಪತ್ರ

ಕಳೆದ ಡಿಸೆಂಬರ್‌ನಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹಾಗೂ ಕಳೆದ ತಿಂಗಳು ಮಹಾರಾಷ್ಟ್ರದಲ್ಲಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಹಾಗೂ ಶರದ್ ಪವರ್ ಜೊತೆ ಮಾತುಕತೆ ನಡೆಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *