ಫ್ರೀ ಬಸ್‌ ಹತ್ತಿ 33 ಗಂಟೆ ಸುತ್ತಾಟ – ಹಿಡಿದು ಪೋಷಕರಿಗೊಪ್ಪಿಸಿದ ಪೊಲೀಸರು!

Public TV
1 Min Read

ಹೈದರಾಬಾದ್‌: ಹಾಸ್ಟೆಲ್‌ಗೆ (Hostel) ಹೋಗುವುದನ್ನು ತಪ್ಪಿಸಿಕೊಳ್ಳುವುದಕ್ಕಾಗಿ 12 ವರ್ಷದ ಬಾಲಕಿಯೊಬ್ಬಳು ಉಚಿತ ಬಸ್ ಸೇವೆ ಬಳಸಿಕೊಂಡು 33 ಗಂಟೆಗಳ ಕಾಲ ಪ್ರಯಾಣ ಮಾಡಿದ ಘಟನೆ ತೆಲಂಗಾಣದಲ್ಲಿ (Telangana) ನಡೆದಿದೆ.

ಬಾಲಕಿ ತಪ್ಪಿಸಿಕೊಂಡಿರುವುದಾಗಿ ನೀಡಲಾದ ದೂರನ್ನು ಆಧರಿಸಿ ತನಿಖೆ ಆರಂಭಿಸಿದ್ದ ಪೊಲೀಸರು (Police) ಬಾಲಕಿಯನ್ನು ಹೈದರಾಬಾದ್‌ನ (Hyderabad) ಜ್ಯೂಬಿಲಿ ಬಸ್ ನಿಲ್ದಾಣದಲ್ಲಿ ಪತ್ತೆ ಹಚ್ಚಿ ಪೋಷಕರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಕುಡಿದು ನೃತ್ಯ ಮಾಡುವ ವೇದಿಕೆಯಲ್ಲಿ ಭಗವಂತ ಶಿವನ ಚಿತ್ರ ಬಳಸಿ ಅಪಮಾನ – ಕಾಂಗ್ರೆಸ್‌ನಿಂದ ದೂರು

ಅಷ್ಟಕ್ಕೂ ನಡೆದಿದ್ದೇನು?
ವಿದ್ಯಾರಣ್ಯಪುರಿಯ ನಿವಾಸಿಯಾದ ಬಾಲಕಿ ಖಾಸಗಿ ಶಾಲೆಯೊಂದರ ಹಾಸ್ಟೆಲ್ ನಲ್ಲಿದ್ದುಕೊಂಡು 8ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಕ್ರಿಸ್ಮಸ್ ರಜೆಗಾಗಿ ಪೆದ್ದಪಳ್ಳಿಯಲ್ಲಿರುವ ತಾತನ ಮನೆಗೆ ತೆರಳಿದ್ದಳು. ರಜೆ ಮುಗಿದ ಬಳಿಕ ತಾತನ ಮನೆಯಿಂದ ಹೊರಟ ಬಾಲಕಿ ಹಾಸ್ಟೆಲ್‌ಗೆ ಹೋಗಲು ಇಷ್ಟವಿಲ್ಲದೇ ಒಂದಾದ ಮೇಲೋಂದು ಬಸ್ ಬದಲಾಯಿಸುತ್ತಾ ಸುಮಾರು 33 ಗಂಟೆ ಪ್ರಯಾಣ ಮಾಡಿದ್ದಾಳೆ.

ಬಸ್ ಹತ್ತಿಸಿದ ಬಳಿಕ ಬಾಲಕಿ ಊರು ತಲುಪಿಲ್ಲ, ಹಾಸ್ಟೆಲ್‌ಗೂ ಸೇರಿಲ್ಲ ಎಂಬುದನ್ನ ತಿಳದು ಆತಂಕಗೊಂಡ ಆಕೆಯ ತಾತ ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ ಸತತ ಕಾರ್ಯಾಚರಣೆ ನಡೆಸಿದ ಪೊಲೀಸರು ಬಾಲಕಿಯನ್ನು ಪತ್ತೆ ಮಾಡಿ ಪೋಷಕರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಕಚೇರಿಗೆ ಹೋಗದಂತೆ ತಡೆ; ಕರ್ತವ್ಯ ಪಥದಲ್ಲೇ ಖೇಲ್‌ ರತ್ನ, ಅರ್ಜುನ ಪ್ರಶಸ್ತಿ ಬಿಟ್ಟು ಹೋದ ಕುಸ್ತಿಪಟು

Share This Article