ಕನ್ನಡದ ಪ್ರತಿಭಾನ್ವಿತ ನಟ ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ’ (Kantara) ಸಿನಿಮಾ ಮಾಡಿದ ಡಿವೈನ್ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಸದ್ಯ ಕಾಂತಾರ ಪಾರ್ಟ್ 1ಗಾಗಿ (Kantara 1) ಅಭಿಮಾನಿಗಳು ಎದುರು ನೋಡ್ತಿದ್ದಾರೆ. ಇದೀಗ ರಿಷಬ್ ಸಿನಿಮಾದಲ್ಲಿ ಜ್ಯೂ.ಎನ್‌ಟಿಆರ್ (Jr.Ntr) ನಟಿಸುತ್ತಾರೆ ಎಂಬ ಸುದ್ದಿ ವೈರಲ್ ಆಗಿದೆ. ಇದನ್ನೂ ಓದಿ:ಸತತ ಸಿನಿಮಾಗಳ ಸೋಲು, ತಮಿಳು ನಿರ್ದೇಶಕನ ಜೊತೆ ಕೈಜೋಡಿಸಿದ ಸಲ್ಮಾನ್ ಖಾನ್
View this post on Instagram
ರಿಷಬ್ ಶೆಟ್ಟಿ ಸೈಲೆಂಟಾಗಿದ್ದಾರೆ. ಕಾರಣ ಕರಾವಳಿಯಲ್ಲಿ ‘ಕಾಂತಾರ’ ಚಿತ್ರೀಕರಣ ನಡೆಯುತ್ತಿದೆ. ಹಾಗಾಗಿ ಕಾಣಿಸುತ್ತಿಲ್ಲ ಶಿವ. ಆದರೆ ಮೊನ್ನೆ ಅವರು ಜ್ಯೂ.ಎನ್‌ಟಿಆರ್ ಜೊತೆ ದಿಢೀರ್ ಎಂದು ಪೋಸ್ ಕೊಟ್ಟರು. ಅಲ್ಲಿಂದ ಆರಂಭ ತಲೆಗೊಂದು ಲೆಕ್ಕಾಚಾರ. ಹಾಗಾಗಿ ರಿಷಬ್ ಜೊತೆ ತಾರಕ್ ನಟಿಸುತ್ತಾರೆ ಎಂಬ ಗುಸು ಗುಸು ಶುರುವಾಗಿದೆ.
View this post on Instagram
ರಿಷಬ್ ಶೆಟ್ಟಿ ಈಗ ಎಲ್ಲೂ ಕಾಣುತ್ತಿಲ್ಲ. ಅದನ್ನು ಅವರೇ ಹೇಳಿದ್ದರು. ಶೂಟಿಂಗ್ ಆರಂಭವಾದ ಮೇಲೆ ನಾಟ್ ರಿಚೇಬಲ್ ಎಂದಿದ್ದರು. ಅದನ್ನು ಮಾಡಿ ತೋರಿಸುತ್ತಿದ್ದಾರೆ. ಈ ನಡುವೆ ಟಾಲಿವುಡ್ ಯಂಗ್ ಟೈಗರ್ ಜ್ಯೂ.ನ್‌ಟಿಆರ್ ಜೊತೆ ಪತ್ನಿ ಪ್ರಗತಿ ಸಮೇತ ಕಾಣಿಸಿಕೊಂಡಿದ್ದಾರೆ. ಆಗ ಎಲ್ಲರೂ ಸೇರಿ ಫೋಟೊ ತೆಗೆಸಿಕೊಂಡರು. ಆಗ ಆಕಾಶಕ್ಕೇರಿದ ಗಾಳಿಪಟದ ಹಾರಾಟ ಈಗಲೂ ನಿಂತಿಲ್ಲ. ಇದರ ಪರಿಣಾಮ, ಕಾಂತಾರದಲ್ಲಿ ಜ್ಯೂ.ನ್‌ಟಿಆರ್ ಕೂಡ ಬಣ್ಣ ಹಚ್ಚಲಿದ್ದಾರೆ. ಹಿಂದೆಂದೂ ಕಾಣದ ರೀತಿಯಲ್ಲಿ ಕಾಣಿಸಲಿದ್ದಾರೆ. ಇದು ನಿಜವಾ ಸುಳ್ಳಾ? ಗೊತ್ತಿಲ್ಲ. ಈ ಸುದ್ದಿ ಮಾತ್ರ ಈಗ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ.
ಜ್ಯೂ.ಎನ್‌ಟಿಆರ್ ತಾಯಿ ಮೂಲತಃ ಮಂಗಳೂರಿನವರು. ಅದರಲ್ಲೂ ರಿಷಬ್ ಕುಂದಾಪುರದವರು. ಹೀಗಾಗಿಯೇ ತಾರಕ್ ಸ್ಪಷ್ಟ ಕನ್ನಡ ಮಾತಾಡುತ್ತಾರೆ. ಅದನ್ನಿಟ್ಟುಕೊಂಡು ಕಾಡುಶಿವ ಹಾಗೂ ಟೈಗರ್ ಜುಗಲ್‌ಬಂದಿ ತೋರಿಸಲಿದ್ದಾರೆ ಅನ್ನೋದು ಸದ್ಯದ ತಾಜಾ ಸುದ್ದಿ. ಕಾಂತಾರ ಮುಗಿವಷ್ಟರಲ್ಲಿ ಇನ್ನು ಯಾರ‍್ಯಾರು ಇದರಲ್ಲಿ ನಾಮಕಾವಾಸ್ತೆ ಸೇರಲಿದ್ದಾರೊ. ಖುದ್ದು ಕಾಡು ಶಿವನಿಗೂ ಗೊತ್ತಿಲ್ಲ. ಸದ್ಯ ಬ್ರೇಕಿಂಗ್ ನ್ಯೂಸ್ ಆಗಿ ಹರಿದಾಡುತ್ತಿದೆ. ಜ್ಯೂ.ಎನ್‌ಟಿಆರ್ ಕಾಂತಾರ ಸಿನಿಮಾದಲ್ಲಿ ನಟಿಸೋದು ಗಾಸಿಪ್ ಅಥವಾ ನಿಜ ಸಂಗತಿನಾ? ಎಂಬುದನ್ನು ಚಿತ್ರತಂಡವೇ ಸ್ಪಷ್ಟನೆ ನೀಡಬೇಕಿದೆ. ಒಂದು ವೇಳೆ, ಈ ಸುದ್ದಿ ನಿಜವೇ ಆಗಿದಲ್ಲಿ ಪ್ರೇಕ್ಷಕರಿಗೆ ಹಬ್ಬದೂಟ ಗ್ಯಾರಂಟಿ.

 
		 
		 
                                
                              
		