Kolar| ದೇವಾಲಯ, ಮನೆ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

Public TV
1 Min Read

– 3.78 ಲಕ್ಷ ರೂ. ಮೌಲ್ಯದ ಚಿನ್ನ, 380 ಗ್ರಾಂ ಬೆಳ್ಳಿ ಆಭರಣಗಳು ವಶಕ್ಕೆ

ಕೋಲಾರ: ದೇವಾಲಯ, ಮನೆ ಕಳವು (Theft) ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಕೋಲಾರದ (Kolar) ಕಾಮಸಮುದ್ರ ಪೊಲೀಸರು (Kamasamudra Police) ಬಂಧಿಸಿದ್ದಾರೆ.

ಆಂದ್ರಪ್ರದೇಶದ ಚಿತ್ತೂರು ಜಿಲ್ಲೆಯ ನಿಮ್ಮಕಂಪಲ್ಲಿ ಗ್ರಾಮದ ವಾಸಿ ಕೆ.ಚಿನ್ನಸ್ವಾಮಿ (57), ತಮಿಳುನಾಡಿನ ಸೇಲಂ ಜಿಲ್ಲೆಯ ಮೆಟ್ಟೂರು ವಾಸಿ ಮಣಿ ಬಾಬು (55) ಬಂಧಿತ ಆರೋಪಿಗಳು. ಬಂಗಾರಪೇಟೆ ತಾಲೂಕಿನ ಕುಂದರಸನಹಳ್ಳಿ ಗ್ರಾಮದ ಕಾಳಿಕಾಂಭ ದೇವಸ್ಥಾನ, ದೋಣಿಮಡಗು ಗ್ರಾಮದ ಸತೀಶ್‌ರೆಡ್ಡಿ, ಸೀನಪ್ಪ ಕೊಂಗರಹಳ್ಳಿ ಗ್ರಾಮದ ವೆಂಕಟೇಶಪ್ಪ, ಮುನಿಯಮ್ಮ, ಶೇಖ್ ಲಿಯಾಕತ್ ಮತ್ತು ಗೌರಮ್ಮ ಮನೆಗಳಲ್ಲಿ ಕಳ್ಳತನವಾಗಿತ್ತು. ಈ ಸಂಬಂಧ ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿತ್ತು. ಈ ಹಿನ್ನೆಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಬದುಕಲು ಸಾಧ್ಯವಾಗುತ್ತಿಲ್ಲ, ದಯಮಾಡಿ ನನಗೆ ವಿಷ ಕೊಡಿ: ಜಡ್ಜ್‌ ಮುಂದೆ ದರ್ಶನ್‌ ಮನವಿ

ಬಂಧಿತರಿಂದ 3.78 ಲಕ್ಷ ರೂ. ಮೌಲ್ಯದ 34 ಗ್ರಾಂ ಚಿನ್ನಾಭರಣ, 380 ಗ್ರಾಂ ಬೆಳ್ಳಿ ಆಭರಣಗಳನ್ನು ಮತ್ತು ಕೃತ್ಯಕ್ಕೆ ಉಪಯೋಗಿಸಿದ ಒಂದು ದ್ವಿಚಕ್ರವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನೂ ಓದಿ: ಯಾದಗಿರಿ | ಅಕ್ಕಿ ಅಕ್ರಮ ಮಾರಾಟ ಜಾಲ ಪತ್ತೆ – 1.17 ಕೋಟಿ ಮೌಲ್ಯದ 4,108 ಕ್ವಿಂಟಾಲ್ ಸೀಜ್

Share This Article