ಬೆಂಗಳೂರು: ಕೇತಗಾನಹಳ್ಳಿ ಅಕ್ರಮ ಭೂ ಒತ್ತುವರಿ ಆರೋಪ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ (H.D.Kumaraswamy) ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ತುರ್ತು ವಿಚಾರಣೆಗೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಸಮಾಜ ಪರಿವರ್ತನಾ ಸಮುದಾಯ ಸಂಸ್ಥೆ ಸಲ್ಲಿಸಿದ್ದ ತುರ್ತು ವಿಚಾರಣೆ ಅರ್ಜಿ ಪರಿಗಣಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್, ಪ್ರಕರಣವನ್ನು ಸಾಮಾನ್ಯ ವಿಚಾರಣೆಯ ಕ್ರಮದಲ್ಲೇ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣ; ಹೆಚ್ಡಿಕೆಗೆ ರಿಲೀಫ್ – ತಹಶೀಲ್ದಾರ್ ಸಮನ್ಸ್ಗೆ 2 ವಾರ ಸುಪ್ರೀಂ ತಡೆ
ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಸರ್ವೇ ಕಾರ್ಯಗಳ ಬಳಿಕ ತುರ್ತು ವಿಚಾರಣೆಗೆ ಮನವಿ ಸಲ್ಲಿಸಲಾಗಿತ್ತು. ಆದರೆ, ಕುಮಾರಸ್ವಾಮಿ ಪರ ವಕೀಲರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ತುರ್ತು ವಿಚಾರಣೆಯ ಅಗತ್ಯವಿಲ್ಲ ಎಂದು ವಾದಿಸಿದರು. ಇದನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್ ಪ್ರಕರಣದಲ್ಲಿ ತುರ್ತು ವಿಚಾರಣೆ ಅವಶ್ಯಕತೆ ಇಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.
ಟ್ರಸ್ಟ್ ಪರವಾಗಿ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದ ಮಂಡಿಸಿದ್ದರು. ಇದನ್ನೂ ಓದಿ: ಬಿಡದಿಯ ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ – ಹೆಚ್ಡಿಕೆಗೆ ಹೈಕೋರ್ಟ್ ಶಾಕ್

