ಭಯೋತ್ಪಾದಕನಾಗಿ ಅಂಬೇಡ್ಕರ್‌, ಭಗತ್‌ ಸಿಂಗ್‌ ಕನಸು ನನಸು ಮಾಡಿದ್ದೇನೆ: ಕೇಜ್ರಿವಾಲ್‌

Public TV
1 Min Read

ನವದೆಹಲಿ: ಭಯೋತ್ಪಾದಕನಾಗಿ ಬಾಬಾ ಸಾಹೇಬ್‌ ಅಂಬೇಡ್ಕರ್‌, ಭಗತ್‌ ಸಿಂಗ್‌ ಅವರ ಕನಸು ನನಸು ಮಾಡಿದ್ದೇನೆ. ರಾಷ್ಟ್ರ ರಾಜಧಾನಿಯಲ್ಲಿ 12,000 ಸ್ಮಾರ್ಟ್‌ ಶಾಲಾ ಕೊಠಡಿಗಳನ್ನು ರೂಪಿಸಿದ್ದೇನೆ ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ಸಂಚಾಲಕ ಅರವಿಂದ್‌ ಕೇಜ್ರಿವಾಲ್‌, ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

ಚುನಾವಣೆ ನಡೆಯಲಿರುವ ಪಂಜಾಬ್‌ನಲ್ಲಿ ಪ್ರತ್ಯೇಕತಾವಾದಿ ಎಂದು ವಿರೋಧ ಪಕ್ಷಗಳು ನನ್ನ ಮೇಲೆ ವಾಗ್ದಾಳಿ ನಡೆಸುತ್ತಿವೆ. ನಾನು ಈ ಶಾಲಾ ಕೊಠಡಿಗಳನ್ನು ದೇಶಕ್ಕೆ ಅರ್ಪಿಸಿದ್ದೇನೆ. ಭಯೋತ್ಪಾದಕನೊಬ್ಬ, ಬಡವರು ಮತ್ತು ಶ್ರೀಮಂತರ ಮಕ್ಕಳು ಒಟ್ಟಿಗೆ ಓದುವ ಶಾಲೆಗಳನ್ನು ನಿರ್ಮಿಸಿದ್ದಾನೆ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಮತ್ತು ಭಗತ್‌ ಸಿಂಗ್‌ ಅವರ ಕನಸು ನನಸು ಮಾಡಿದ್ದಾನೆ ಎಂದು ಪ್ರತಿಪಕ್ಷಗಳಿಗೆ ಚಾಟಿ ಬೀಸಿದ್ದಾರೆ. ಇದನ್ನೂ ಓದಿ: ಪಂಜಾಬ್ ಚುನಾವಣೆಗೂ ಮುನ್ನಾ ದಿನ 12,430 ಹೊಸ ಸ್ಮಾರ್ಟ್ ತರಗತಿ ಉದ್ಘಾಟಿಸಿದ ಕೇಜ್ರಿವಾಲ್

ಈಗ ಅಧಿಕಾರಿಗಳು, ನ್ಯಾಯಾಧೀಶರು, ರಿಕ್ಷಾ ಚಾಲಕರು ಮತ್ತು ಕೆಲಸಗಾರರ ಮಕ್ಕಳು ಒಂದೇ ಮೇಜಿನ ಮೇಲೆ ಒಟ್ಟಿಗೆ ಕುಳಿತು ಓದುತ್ತಾರೆ ಎಂದು ಹೇಳಿದ್ದಾರೆ.

ದೇಶದ ಜನರು ಈ ಭ್ರಷ್ಟರಿಗೆ (ವಿಪಕ್ಷಗಳು) ತಲೆ ಬಾಗುವುದಿಲ್ಲ. ಅಂಬೇಡ್ಕರ್‌ ಮತ್ತು ಭಗತ್‌ ಸಿಂಗ್‌ ಅವರ ಕನಸನ್ನು ನನಸು ಮಾಡುವ ಪ್ರಯತ್ನವನ್ನು ಮುಂದುವರಿಸುತ್ತೇನೆ. ದೇಶದ ಕಲ್ಯಾಣಕ್ಕಾಗಿ ರಾಜಕೀಯ ಸಿದ್ಧಾಂತವನ್ನು ಪಕ್ಕಕ್ಕಿಟ್ಟು ಇತರೆ ರಾಜ್ಯಗಳಲ್ಲಿ ಶಿಕ್ಷಣ ಮತ್ತು ಆರೋಗ್ಯ ಸುಧಾರಣೆಗಾಗಿ ಸಹಾಯ ಮಾಡಲು ಬದ್ಧ ಎಂದು ಕೇಜ್ರಿವಾಲ್‌ ತಿಳಿಸಿದ್ದಾರೆ. ಇದನ್ನೂ ಓದಿ: ಪಂಜಾಬ್‍ನನ್ನು ಕಾಂಗ್ರೆಸ್ ಲೂಟಿ ಮಾಡುತ್ತಿದೆ: ಅರವಿಂದ್ ಕೇಜ್ರಿವಾಲ್

ನಾನು ಇಂದು ಒಂದು ಪ್ರಸ್ತಾಪವನ್ನು ಮಾಡುತ್ತಿದ್ದೇನೆ. ಯಾವುದೇ ರಾಜ್ಯ ಸರ್ಕಾರ, ಅದು ಬಿಜೆಪಿ ಅಥವಾ ಕಾಂಗ್ರೆಸ್‌ ಆಗಿರಲಿ. ಶಿಕ್ಷಣ ಮೂಲಸೌಕರ್ಯವನ್ನು ಸುಧಾರಿಸಲು ಬಯಸಿದರೆ, ಅದಕ್ಕಾಗಿ ಶಿಕ್ಷಣ ಸಚಿವ ಮನೀಶ್‌ ಸಿಸೋಡಿಯಾ ಅವರ ಸೇವೆಯನ್ನು ನೀಡಲು ನಾವು ಸಿದ್ಧರಿದ್ದೇವೆ ಎಂದು ಭರವಸೆ ನೀಡಿದ್ದಾರೆ.

ಅರವಿಂದ್‌ ಕೇಜ್ರಿವಾಲ್‌ ಒಬ್ಬ ಭಯೋತ್ಪಾದಕ ಎಂದು ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರು ಟೀಕಿಸಿದ್ದರು. ಅದಕ್ಕೆ ಪ್ರತಿಯಾಗಿ ಪ್ರತಿಪಕ್ಷಗಳ ನಾಯಕರಿಗೆ ಕೇಜ್ರಿವಾಲ್‌ ಟಾಂಗ್‌ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *