ಶೋಪಿಯಾನ್‌ನಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಮೂವರು ಉಗ್ರರು ಮಟಾಶ್‌

Public TV
1 Min Read

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ (Shopian) ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಹತನಾಗಿದ್ದಾರೆ.

ಎನೌಕೌಂಟರ್‌ನಲ್ಲಿ ಉನ್ನತ ಭಯೋತ್ಪಾದಕ ಕಮಾಂಡರ್ ಸೇರಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ (ಸಿಎಎಸ್ಒ) ನಡೆಯುತ್ತಿರುವ ಸ್ಥಳದಲ್ಲಿ ಭಯೋತ್ಪಾದಕರು ಸಿಕ್ಕಿಬಿದ್ದಿದ್ದರು ಎಂದು ಭದ್ರತಾ ಪಡೆಗಳು ತಿಳಿಸಿವೆ. ಇದನ್ನೂ ಓದಿ: INS ವಿಕ್ರಾಂತ್ ಎಲ್ಲಿದೆ ಹೇಳಿ – ಪಿಎಂ ಕಚೇರಿ ಅಧಿಕಾರಿಯಂತೆ ಕರೆ ಮಾಡಿದ್ದವ ಅರೆಸ್ಟ್‌

ದಕ್ಷಿಣ ಕಾಶ್ಮೀರ ಜಿಲ್ಲೆಯ ಶುಕ್ರೂ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಅಲ್ಲಿ ಸುತ್ತುವರಿದು ಶೋಧ ಕಾರ್ಯಾಚರಣೆ ಪ್ರಾರಂಭಿಸಿದವು. ಭಯೋತ್ಪಾದಕರು ಪ್ರತಿದಾಳಿ ನಡೆಸಿದರು. ಇದು ಪರಸ್ಪರರ ನಡುವೆ ಗುಂಡಿನ ಚಕಮಕಿಗೆ ಕಾರಣವಾಯಿತು.

ಏ.22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆಂದು ಶಂಕಿಸಲಾಗಿರುವ ಮೂವರು ಪಾಕಿಸ್ತಾನಿ ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್, ಅಲಿ ಭಾಯ್ ಮತ್ತು ಹಾಶಿಮ್ ಮೂಸಾ ಪೋಸ್ಟರ್‌ಗಳನ್ನು ಭದ್ರತಾ ಪಡೆಗಳು ಪೋಸ್ಟ್ ಮಾಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಇದನ್ನೂ ಓದಿ: ಪಹಲ್ಗಾಮ್ ದಾಳಿಯ 3 ಉಗ್ರರ ಫೋಟೋ ರಿಲೀಸ್ – ಸುಳಿವು ಕೊಟ್ಟವರಿಗೆ 20 ಲಕ್ಷ ಬಹುಮಾನ

Share This Article