ಉರಿ ಸೆಕ್ಟರ್‌ನಲ್ಲಿ ಒಳನುಸುಳಲು ಯತ್ನಿಸಿದ ಪಾಕ್ ಉಗ್ರನ ಹತ್ಯೆ

1 Min Read

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಉರಿ ಸೆಕ್ಟರ್‌ನಲ್ಲಿ (Uri Sector) ಭಾರತೀಯ ಸೇನೆ ಪಾಕಿಸ್ತಾನದ ಉಗ್ರನನ್ನು (Pakistan Terrorist) ಹತ್ಯೆ ಮಾಡಿದ್ದು, ಒಳನುಸುಳುವಿಕೆಯನ್ನು (Infiltration) ವಿಫಲಗೊಳಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಪೋಸ್ಟ್ ಮಾಡಿದೆ. ಮಾರ್ಚ್ 14 ಹಾಗೂ 15ರ ರಾತ್ರಿ ಭಯೋತ್ಪಾದಕ ಒಳನುಸುಳುವಿಕೆಗೆ ಯತ್ನಿಸುತ್ತಾನೆ ಎಂಬ ಜಮ್ಮು ಕಾಶ್ಮೀರ ಪೊಲೀಸರ ನಿಖರ ಮಾಹಿತಿ ಆಧರಿಸಿ, ಕಾರ್ಯಾಚರಣೆ ನಡೆಸಲಾಯಿತು ಎಂದು ತಿಳಿಸಿದೆ. ಇದನ್ನೂ ಓದಿ: ಅಕ್ರಮ ಸಿಲಿಂಡರ್‌ ದಾಸ್ತಾನು – ಬೆಂಗಳೂರಲ್ಲಿ 4 ಕೇಸ್‌ ದಾಖಲು

ಜಂಟಿ ಕಾರ್ಯಾಚರಣೆ ವೇಳೆ ಪೊದೆಯಲ್ಲಿ ಅನುಮಾನಾಸ್ಪದ ಚಲನವಲನ ಗಮನಿಸಿದ ಸೈನಿಕರು, ಭಯೋತ್ಪಾದಕನ್ನು ಸೆರೆಹಿಡಿಯಲು ಯತ್ನಿಸಿದರು. ಅಷ್ಟರಲ್ಲಿ ಭಯೋತ್ಪಾದಕ ಗುಂಡು ಹಾರಿಸಲು ಯತ್ನಿಸಿದ್ದಾನೆ. ಕೆಲಕಾಲ ಗುಂಡಿನಚಕಮಕಿ ನಡೆದಿದೆ. ಈ ವೇಳೆ ಒಬ್ಬ ಪಾಕಿಸ್ತಾನಿ ಉಗ್ರನನ್ನು ಹತ್ಯೆ ಮಾಡಲಾಗಿದೆ. ಇದನ್ನೂ ಓದಿ: ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌

ಭದ್ರತಾ ಪಡೆಗಳು ಎಕೆ ರೈಫಲ್ಸ್ ಪಿಸ್ತೂಲ್‌ಗಳು, ಹಾಗೂ ದೊಡ್ಡ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ. ಆ ಪ್ರದೇಶದಲ್ಲಿ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸೌದಿ ಅರೇಬಿಯಾದಲ್ಲಿರುವ ಅಮೆರಿಕದ ವಾಯುನೆಲೆಯ ಮೇಲೆ ಇರಾನ್ ದಾಳಿ

Share This Article