ಭದ್ರತಾ ಪಡೆಯಿಂದ ಯಶಸ್ವಿ ಕಾರ್ಯಚರಣೆ – ಓರ್ವ ಭಯೋತ್ಪಾದಕ ಹತ

Public TV
1 Min Read

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕಿಶ್ತ್ವಾರ್ (Kishtwar) ಜಿಲ್ಲೆಯ ಛತ್ರು ಪ್ರದೇಶದಲ್ಲಿ ಭಾರತೀಯ ಸೇನೆಯು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಭಯೋತ್ಪಾದಕನೊಬ್ಬನನ್ನು ಹೊಡೆದುರುಳಿಸಲಾಗಿದೆ.

ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಛತ್ರುವಿನ ಕಾಡಿನ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಸಾಧ್ಯತೆಯನ್ನು ಗಮನಿಸಿದ ಸೇನೆ, ಶೋಧ ಕಾರ್ಯಾಚರಣೆಯನ್ನು ಆರಂಭಿಸಿತು. ಈ ವೇಳೆ ಭಯೋತ್ಪಾದಕರೊಂದಿಗೆ (Terrorists) ತೀವ್ರ ಗುಂಡಿನ ಚಕಮಕಿಯಾಗಿದ್ದು, ಒಬ್ಬ ಭಯೋತ್ಪಾದಕನನ್ನು ಸೇನೆಯು ಯಶಸ್ವಿಯಾಗಿ ಹೊಡೆದುರುಳಿಸಿದೆ. ಇದನ್ನೂ ಓದಿ: ಬಿಹಾರ ಚುನಾವಣೆ ವೇಳೆ ಕೇಂದ್ರ ಸರ್ಕಾರ ಉಗ್ರ ರಾಣಾನನ್ನ ಗಲ್ಲಿಗೇರಿಸಲಿದೆ: ಸಂಜಯ್ ರಾವತ್‌

ಈ ಕಾರ್ಯಾಚರಣೆಯಲ್ಲಿ ಯಾವುದೇ ಯೋಧರಿಗೆ ಗಾಯವಾಗಿಲ್ಲ ಎಂದು ಸೇನಾ ಮೂಲಗಳು ತಿಳಿಸಿವೆ. ಕೊಲ್ಲಲ್ಪಟ್ಟ ಭಯೋತ್ಪಾದಕನ ಗುರುತು ಇನ್ನೂ ಖಚಿತವಾಗಿಲ್ಲ. ಭದ್ರತಾ ಸಿಬ್ಬಂದಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಕಾರ್ಯಾಚರಣೆಯ ಸ್ಥಳದಿಂದ ಶಸ್ತ್ರಾಸ್ತ್ರಗಳು, ಗುಂಡಿನ ಸಾಮಗ್ರಿಗಳು ಮತ್ತು ಇತರ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

Share This Article