ಭಾರತದಲ್ಲಿ 20 ಲಕ್ಷಕ್ಕೆ ಕಾರು – ಕೇಂದ್ರದ ಜೊತೆ ಟೆಸ್ಲಾ ಮಾತುಕತೆ

Public TV
2 Min Read

ನವದೆಹಲಿ: ಭಾರತದಲ್ಲಿ ಎಲೆಕ್ಟ್ರಿಕ್‌ ಕಾರು ಘಟಕ (Electric Car Manufacturing Plant) ನಿರ್ಮಾಣ ಸಂಬಂಧ ಎಲಾನ್‌ ಮಸ್ಕ್‌ (Elon Musk) ಮಾಲೀಕತ್ವದ ಟೆಸ್ಲಾ (Tesla) ಕಂಪನಿ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸುತ್ತಿದೆ.

ವಾರ್ಷಿಕ 5 ಲಕ್ಷ ಎಲೆಕ್ಟ್ರಿಕ್ ವಾಹನ ತಯಾರಿಸುವ ಸಾಮರ್ಥ್ಯದ ಘಟಕ ಸ್ಥಾಪನೆ ಸಂಬಂಧ ಹೂಡಿಕೆಯ ಪ್ರಸ್ತಾಪಕ್ಕಾಗಿ ಟೆಸ್ಲಾ ಭಾರತ ಸರ್ಕಾರದೊಂದಿಗೆ ಚರ್ಚೆಯನ್ನು ಪ್ರಾರಂಭಿಸಿದೆ ಎಂದು ಸರ್ಕಾರಿ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ.

ಭಾರತದಲ್ಲಿ ತಯಾರಾಗುವ ಎಲೆಕ್ಟ್ರಿಕ್ ಕಾರಿನ ಬೆಲೆ 20 ಲಕ್ಷ ರೂ. ನಿಂದ ಆರಂಭವಾಗುವ ಸಾಧ್ಯತೆಯಿದೆ. ಇಂಡೋ-ಪೆಸಿಫಿಕ್ ಪ್ರದೇಶದ ದೇಶಗಳಿಗೆ ಭಾರತದಿಂದ (India) ಕಾರುಗಳನ್ನು ರಫ್ತು ಮಾಡಲು ಟೆಸ್ಲಾ ಮುಂದಾಗಿದೆ ಎಂದು ವರದಿಯಾಗಿದೆ.  ಇದನ್ನೂ ಓದಿ: Public TV Explainer – ಮೋದಿಯನ್ನು ಫಾಲೋ ಮಾಡಿದ ಮಸ್ಕ್‌: ಟೆಸ್ಲಾ ಕಾರು ಇನ್ನೂ ಭಾರತಕ್ಕೆ ಬಂದಿಲ್ಲ ಯಾಕೆ?

 

ಕಳೆದ ತಿಂಗಳು ಅಮೆರಿಕ ಪ್ರವಾಸದ ಸಂದರ್ಭದಲ್ಲಿ ಮಸ್ಕ್ ಅವರು ಪ್ರಧಾನಿ ಮೋದಿ (PM Narendra Modi) ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಸ್ಕ್‌, ಈ ಭೇಟಿ ನನಗೆ ರೋಮಾಂಚನಕಾರಿ ಅನುಭವ ನೀಡಿದೆ. ಅವರು ಕೆಲವು ವರ್ಷಗಳ ಹಿಂದೆ ನಮ್ಮ ಕಾರ್ಖಾನೆಗೆ ಭೇಟಿ ನೀಡಿದ್ದರು. ಇದರಿಂದಾಗಿ ಅವರ ಬಗ್ಗೆ ನನಗೆ ತಿಳಿದಿದೆ. ಅವರು ನನಗೆ ಭಾರತಕ್ಕೆ ಆಮಂತ್ರಣ ನೀಡಿದ್ದಾರೆ. ಶೀಘ್ರದಲ್ಲೇ ನಾನು ಭಾರತಕ್ಕೆ ಭೇಟಿ ನೀಡಲಿದ್ದೇನೆ ಎಂದು ತಿಳಿಸಿದ್ದರು.

ಮೋದಿಯವರು ನಿಜವಾಗಿಯೂ ಭಾರತದ ಬಗ್ಗೆ ಬಹಳಷ್ಟು ಕಾಳಜಿ ವಹಿಸುತ್ತಾರೆ. ಅಲ್ಲದೇ ಅವರು ಸರಿಯಾದ ನಿರ್ಧಾರಗಳನ್ನೇ ತೆಗೆದುಕೊಳ್ಳುತ್ತಾರೆ. ಈಗ ತಮ್ಮ ದೇಶದಲ್ಲಿ ಹೂಡಿಕೆ ಮಾಡಲು ನಮ್ಮನ್ನು ಒತ್ತಾಯಿಸುತ್ತಿದ್ದಾರೆ. ಇದು ಭಾರತದ ಅಭಿವೃದ್ಧಿಗೆ ಸಹಕಾರವಾಗಲಿದೆ. ಇದೇ ವರ್ಷದಲ್ಲಿ ಟೆಸ್ಲಾ ಕಾರ್ಖಾನೆಯನ್ನು ಭಾರತದಲ್ಲಿ ಸ್ಥಾಪಿಸಲು ಸ್ಥಳವನ್ನು ಗುರುತಿಸುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದರು.

2015ರಲ್ಲಿ ಅಮೆರಿಕ ಪ್ರವಾಸದ ವೇಳೆ ಪ್ರಧಾನಿ ಮೋದಿ ಟೆಸ್ಲಾ ಘಟಕಕ್ಕೆ ಭೇಟಿ ನೀಡಿ ಭಾರತದಲ್ಲೂ ಕಾರು ಉತ್ಪಾದನೆ ಮಾಡುವಂತೆ ಮಸ್ಕ್ ಬಳಿ ಮನವಿ ಮಾಡಿದ್ದರು. ಇದಾದ ಬಳಿಕ 2016ರಲ್ಲೇ ಟೆಸ್ಲಾ ಭಾರತಕ್ಕೆ ಬರುವುದಾಗಿ ಹೇಳಿತ್ತು. 2020ರ ಅಕ್ಟೋಬರ್‌ನಲ್ಲಿ ಟೆಸ್ಲಾದ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಕಂಪನಿಯು 2021ಕ್ಕೆ ಭಾರತಕ್ಕೆ ಕಾಲಿಡಲಿದೆ ಎಂದಿದ್ದರು. ಆದರೆ ಕೇಂದ್ರ ಸರ್ಕಾರ ಮತ್ತು ಟೆಸ್ಲಾ ಕಂಪನಿ ಜೊತೆ ತೆರಿಗೆ ವಿಚಾರದಲ್ಲಿ ತಿಕ್ಕಾಟ ನಡೆಯುತ್ತಿರುವ ಕಾರಣ ಭಾರತದಲ್ಲಿ ಇನ್ನೂ ಟೆಸ್ಲಾ ಕಾರು ಬಿಡುಗಡೆಯಾಗಿಲ್ಲ.

ಈಗಾಗಲೇ ಅಮೆರಿಕ, ಕೆನಡಾ, ಜರ್ಮನಿ, ಚೀನಾ, ಮೆಕ್ಸಿಕೋದಲ್ಲಿ ಟೆಸ್ಲಾ ಕಂಪನಿ ದೊಡ್ಡ ಫ್ಯಾಕ್ಟರಿ ತೆರೆದಿದೆ. ಏಷ್ಯಾ ಖಂಡದ ದೇಶಗಳಿಗೆ ಚೀನಾದಿಂದ ಕಾರುಗಳನ್ನು ರಫ್ತು ಮಾಡಲು ಮುಂದಾಗಿತ್ತು. ಟೆಸ್ಲಾದ ಈ ನೀತಿಗೆ ಭಾರತ ವಿರೋಧ ವ್ಯಕ್ತಪಡಿಸಿತ್ತು.

 

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್