Chitradurga| ಮನೆ ಕಾಂಪೌಂಡ್ ಒಳಗೆ ನುಗ್ಗಿ ಮಹಿಳೆಯ ಕೊರಳಲ್ಲಿದ್ದ ಸರ ಕದ್ದು ಆರೋಪಿ ಪರಾರಿ

Public TV
1 Min Read

ಚಿತ್ರದುರ್ಗ: ಮನೆಯ ಕಾಂಪೌಂಡ್ ಒಳಗೆ ನುಗ್ಗಿ ಮಹಿಳೆಯ ಚಿನ್ನದ ಸರ (Gold Chain) ಕದ್ದು ಆರೋಪಿ ಪರಾರಿಯಾಗಿರುವ ಘಟನೆ ಚಿತ್ರದುರ್ಗದಲ್ಲಿ (Chitradurga) ನಡೆದಿದೆ.

ವಿದ್ಯಾನಗರ (Vidyanagar) ಬಡಾವಣೆಯಲ್ಲಿ ಸರಗಳ್ಳತನ ಪ್ರಕರಣ ನಡೆದಿದೆ. ಸೌಮ್ಯ ಮಂಜುನಾಥ್ ಕೊರಳಲ್ಲಿದ್ದ ಚಿನ್ನದ ಸರ ಕದ್ದು ಆರೋಪಿ ಪರಾರಿಯಾಗಿದ್ದಾನೆ. ಅಂಗಳಕ್ಕೆ ನೀರು ಹಾಕಲು ಸೌಮ್ಯ ಹೊರ ಬಂದಿದ್ದಾಗ ಕಳ್ಳತನ ನಡೆದಿದೆ. ಮಾಸ್ಕ್ ಧರಿಸಿ ಬಂದಿದ್ದ ಆರೋಪಿ ಕೃತ್ಯ ಎಸಗಿದ್ದಾನೆ. ಇದನ್ನೂ ಓದಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಹತ್ಯೆ

2.50ಲಕ್ಷ ಮೌಲ್ಯದ 40ಗ್ರಾಂ ಚಿನ್ನದ ಸರ ಕದ್ದು ಕಳ್ಳ ಎಸ್ಕೇಪ್ ಆಗಿದ್ದಾನೆ. ಸ್ಥಳಕ್ಕೆ ಡಿವೈಎಸ್ಪಿ ದಿನಕರ್, ಸಿಪಿಐ ತಿಪ್ಪೇಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಬೀದರ್‌ನಲ್ಲಿ ಚಿತ್ರಾನ್ನ ತಿಂದು ವಸತಿ ಶಾಲೆಯ 50 ಮಕ್ಕಳು ಅಸ್ವಸ್ಥ

Share This Article