ಹಣ ಕೊಡದಿದ್ದಕ್ಕೆ ಬಿಜೆಪಿ ಬಾವುಟಕ್ಕೆ ಬೆಂಕಿ – ಚಿನ್ನ ಗಿರವಿಯಿಟ್ಟು ಕಾರ್ಯಕರ್ತರಿಗೆ ಹಣ ಕೊಟ್ಟ ಮುಖಂಡ

Public TV
1 Min Read

ಮೈಸೂರು: ವಿಜಯ ಸಂಕಲ್ಪ ಯಾತ್ರೆಗೆ (Vijaya Sankalpa Yatra) ಬಂದ ಜನರಿಗೆ ಹಣ ಕೊಡದ ಹಿನ್ನೆಲೆ ಬಿಜೆಪಿ ಬಾವುಟಕ್ಕೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮೈಸೂರು (Mysuru) ಜಿಲ್ಲೆಯ ಕೆ.ಆರ್ ನಗರದಲ್ಲಿ ನಡೆದಿದೆ.

ಶುಕ್ರವಾರ ಕೆ.ಆರ್ ನಗರದಲ್ಲಿ (KR Nagar) ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (K. S. Eshwarappa) ನೇತೃತ್ವದ ವಿಜಯ ಸಂಕಲ್ಪ ಯಾತ್ರೆ ನಡೆದಿತ್ತು. ಯಾತ್ರೆಯಲ್ಲಿ ಮಾಜಿ ಸಿಎಂ ಸದಾನಂದ ಗೌಡ (D. V. Sadananda Gowda) ಸೇರಿದಂತೆ ಕೆ.ಆರ್ ನಗರ ತಾಲೂಕಿನ ಬಿಜೆಪಿ (BJP) ಟಿಕೆಟ್ ಆಕಾಂಕ್ಷಿಗಳು ರೋಡ್ ಶೋನಲ್ಲಿ ಭಾಗಿಯಾಗಿದ್ದರು. ಅಕ್ಕಪಕ್ಕದ ಗ್ರಾಮಗಳಿಂದ ನೂರಾರು ಬಿಜೆಪಿ ಕಾರ್ಯಕರ್ತರು ರೋಡ್ ಶೋನಲ್ಲಿ ಭಾಗವಹಿಸಿದ್ದರು. ಯಾತ್ರೆಗೆ ಬಂದ ಜನರಿಗೆ ಆಯೋಜಕರು ಹಣ ನೀಡಿರಲಿಲ್ಲ. ಇದನ್ನೂ ಓದಿ: ಶಾಸಕರ ಮನೆ ಬೆನ್ನಲ್ಲೇ ಪ್ರತಿಷ್ಠಿತ ಉದ್ಯಮಿ ಮನೆಯಲ್ಲಿದ್ದ ಕೋಟಿ.. ಕೋಟಿ.. ಅಕ್ರಮ ಹಣ ಸೀಜ್

80 ಬೈಕ್‌ಗಳಿಗೆ ಪೆಟ್ರೋಲ್‌ಗೆ ದುಡ್ಡು ಕೊಡಲಿಲ್ಲ ಎಂದು ರೊಚ್ಚಿಗೆದ್ದ ಕಾರ್ಯಕರ್ತರು ಬಿಜೆಪಿ ಬಾವುಟಕ್ಕೆ (BJP Flag) ಬೆಂಕಿ ಹಚ್ಚಿ ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ ಗೌಡರ (Mirle Srinivas Gowda) ವಿರುದ್ಧ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ನಾಟಕ ಟಿಪ್ಪು ವಿರುದ್ಧ ಅಲ್ಲ, ತುಕ್ಡೆ ತುಕ್ಡೆ ಅನ್ನೋರ ವಿರುದ್ಧ- ಅಡ್ಡಂಡ ಕಾರ್ಯಪ್ಪ

ಜನರ ಅಕ್ರೋಶಕ್ಕೆ ತತ್ತರಿಸಿ ಕೆ.ಆರ್ ನಗರದ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಕಾಶ್, ಚಿನ್ನ ಗಿರವಿಯಿಟ್ಟು ಕಾರ್ಯಕರ್ತರಿಗೆ ಹಣ ನೀಡಿದರು. ಇದನ್ನೂ ಓದಿ: ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ವಿರುಷ್ಕಾ ಜೋಡಿ ಭೇಟಿ

Share This Article
Leave a Comment

Leave a Reply

Your email address will not be published. Required fields are marked *