ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಪಾತ್ರವಿಲ್ಲ: ಶ್ರೀರಾಮುಲು

Public TV
1 Min Read

ಬಳ್ಳಾರಿ: ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಪಾತ್ರವಿಲ್ಲ. ನಾವೂ ಆಪರೇಷನ್ ಕಮಲ ಮಾಡುತ್ತಿಲ್ಲ ಎಂದು ಬಳ್ಳಾರಿಯಲ್ಲಿ ಉಸ್ತುವಾರಿ ಸಚಿವ ಶ್ರೀರಾಮುಲು ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವೂ ಯಾವುದೇ ಆಪರೇಷನ್ ಕಮಲ ಮಾಡುತ್ತಿಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡುತ್ತಾರೆ ಎನ್ನುವುದನ್ನು ಕೇಳಿದ್ದೇನೆ. ಈ ರೀತಿಯ ಹಲವಾರು ರಾಜಕೀಯ ಘಟನೆಗಳು ಬೇರೆ ಬೇರೆ ರಾಜ್ಯಗಳಲ್ಲಿ ನಡೆದಿವೆ. ಅಲ್ಲಿನ ಶಾಸಕರೇ ಆ ಸರ್ಕಾರದಲ್ಲಿ ಇರಲ್ಲ ಅಂದ ಮೇಲೆ ಅಘಾಡಿ ಸರ್ಕಾರ ಉಳಿಯುವ ಮಾತೇ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: 7 ಭ್ರೂಣಗಳ ಪತ್ತೆ ಪ್ರಕರಣ – ಭ್ರೂಣಗಳನ್ನು ಎಸೆದಿದ್ದ ಆಸ್ಪತ್ರೆ ಸೀಜ್ ಮಾಡಿದ DHO

ಇದೇ ವೇಳೆ ಮನಸ್ಸು ಮಾಡಿದರೆ ಒಂದು ದಿನದ ಮಟ್ಟಿಗೆ ನಾನು ಸಿಎಂ ಆಗುತ್ತೇನೆ ಎಂಬ ಜನಾರ್ದನ ರೆಡ್ಡಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಇದರ ಬಗ್ಗೆ ನೀವು ಜರ್ನಾದನ ರೆಡ್ಡಿ ಅವರನ್ನೇ ಕೇಳಬೇಕು. ಜರ್ನಾದನ ರೆಡ್ಡಿ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ಅದು ಅವರ ವೈಯಕ್ತಿಕ ಹೇಳಿಕೆ, ಅವರ ಹೇಳಿಕೆಗೂ ಹಾಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿಷಕಂಟನಂತೆ ಮೋದಿ 19 ವರ್ಷಗಳಿಂದ ಗುಜರಾತ್ ಗಲಭೆ ನೋವನ್ನು ಸಹಿಸಿಕೊಂಡಿದ್ದಾರೆ: ಅಮಿತ್ ಶಾ

ಮುಂಬರುವ ಚುನಾವಣೆಯಲ್ಲಿ ನಾನು ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು ಅಂತ ಇನ್ನೂ ನಿರ್ಧಾರ ಮಾಡಿಲ್ಲ. ನನ್ನ ಸ್ಪರ್ಧೆ ಬಗ್ಗೆ ಪಕ್ಷ ನಿರ್ಧಾರ ಮಾಡುತ್ತದೆ. ಸದ್ಯಕ್ಕೆ ಸೇವೆ ಮಾಡುವ ಅವಕಾಶವನ್ನು ಭಗವಂತ ನೀಡಿದ್ದಾನೆ. ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆಗಿರುವೆ. ಜಿಲ್ಲೆಯ ಅಭಿವೃದ್ಧಿಗಾಗಿ ಶ್ರಮಿಸುವೆ ಎಂದಿದ್ದಾರೆ.

Live Tv

Share This Article
Leave a Comment

Leave a Reply

Your email address will not be published. Required fields are marked *