ಕುರಿ ಕಾಯ್ತಿದ್ದ ಬಾಲಕ ಮರಳಿ ಶಾಲೆಗೆ – ಬಾಲಕನ ಭವಿಷ್ಯ ಉಜ್ವಲವಾಗಲಿ ಅಂತಾ ಸಿಎಂ ಟ್ವೀಟ್

Public TV
1 Min Read

ಚಿತ್ರದುರ್ಗ: ಶಾಲೆ (School) ಬಿಟ್ಟು ಕುರಿ ಕಾಯುತ್ತಿದ್ದ ಚಿತ್ರದುರ್ಗ (Chitradurga) ಜಿಲ್ಲೆಯ ಮೊಳಕಾಲ್ಮೂರು (Molakalmuru) ತಾಲೂಕಿನ ಬಸಾಪುರ ಗ್ರಾಮದ ಶಿಕ್ಷಣ ವಂಚಿತ 11 ವರ್ಷದ ಬಾಲಕ ಯೋಗೇಶ್‌ನನ್ನು ಅಧಿಕಾರಿಗಳು ಮರಳಿ ಶಾಲೆಗೆ ಕರೆತಂದಿದ್ದಾರೆ.

ಯೋಗೇಶ್‌ನ ಪೋಷಕರು ಬಡತನದ ಬೇಗೆಯಿಂದ ಬಳಲಿದ್ದು, ಕಳೆದ 2 ವರ್ಷಗಳಿಂದ ಯೋಗೇಶ್‌ನನ್ನು ಒತ್ತಾಯ ಪೂರ್ವಕವಾಗಿ ಶಾಲೆ ಬಿಡಿಸಿ ಕುರಿ ಕಾಯಲು ಕಳುಹಿಸುತ್ತಿದ್ದರು. ಇದನ್ನು ಗಮನಿಸಿದ ಚಳ್ಳಕೆರೆಯ ಮಹೇಂದ್ರ ಈ ಬಗ್ಗೆ ಟ್ವೀಟ್ (Tweet) ಮಾಡಿ ಮುಖ್ಯಮಂತ್ರಿ ಕಚೇರಿಯ ಗಮನ ಸೆಳೆದಿದ್ದರು. ಇದನ್ನೂ ಓದಿ: ಯಲಹಂಕ ದೊಡ್ಡದೇನಲ್ಲ ನನಗೆ. ಬಾರಲೇ ಅಲ್ಲಿಗೆ ಬರೀನಿ ಬಾ: ಸಚಿವ ಸುಧಾಕರ್‌ ಧಮ್ಕಿ

ಈ ಟ್ವೀಟ್ ಮಾಡಿದ ಒಂದೇ ದಿನದಲ್ಲಿ ಬಾಲಕನನ್ನು ಪತ್ತೆ ಹಚ್ಚಿದ ಅಧಿಕಾರಿಗಳು, ಪೋಷಕರ ಮನವೊಲಿಸಿ ಮರಳಿ ಶಾಲೆಗೆ ಕರೆತಂದಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಟ್ವೀಟ್ ಮಾಡಿದ್ದು, ಬಾಲ್ಯದಲ್ಲಿ ನಾನು ಸಹ ಶಿಕ್ಷಣದಿಂದ ವಂಚಿತನಾಗಿದ್ದೆ. ರಾಜಪ್ಪ ಎಂಬ ಮೇಷ್ಟ್ರು ನನಗೆ ಐದನೇ ತರಗತಿಗೆ ದಾಖಲಾತಿ ಮಾಡಿಸಿದ್ದರು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಸನಾತನ ಧರ್ಮದ ತತ್ವಗಳ ವಿರುದ್ಧ ಹೋರಾಡಲು INDIA ಒಕ್ಕೂಟ ರಚಿಸಿದೆ: ಡಿಎಂಕೆ ನಾಯಕ ಪೊನ್ಮುಡಿ ವಿವಾದಾತ್ಮಕ ಹೇಳಿಕೆ

ಅಂದು ನನಗೆ ಶಿಕ್ಷಣ (Education) ಸಿಕ್ಕಿದ್ದರಿಂದ ಇಂದು ನಾನು ಮುಖ್ಯಮಂತ್ರಿ ಆಗಲು ಸಾಧ್ಯವಾಗಿದೆ. ಮರಳಿ ಶಿಕ್ಷಣದತ್ತ ಮುಖಮಾಡಿದ ಬಾಲಕ ಯೋಗೇಶನ ಭವಿಷ್ಯ ಉಜ್ವಲವಾಗಲಿ ಎಂದು ಶುಭಹಾರೈಸಿದ್ದಾರೆ. ಇದರಿಂದ ಟ್ವೀಟ್ ಮೂಲಕ ಸಿಎಂ ಕಚೇರಿ ಗಮನ ಸೆಳೆದಿದ್ದ ಸ್ಥಳೀಯ ಮಹೇಂದ್ರ ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹೊಸ ಸಂಸತ್ ಭವನದಲ್ಲಿ ಸಿಬ್ಬಂದಿಗೆ ನೂತನ ಡ್ರೆಸ್ ಕೋಡ್

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್