ಧಗಧಗನೆ ಹೊತ್ತಿ ಉರಿದ ಕಾರು – ಅದೃಷ್ಟವಶಾತ್ ಚಾಲಕ ಪಾರು

Public TV
1 Min Read

ಚಿತ್ರದುರ್ಗ: ಚಲಿಸುತ್ತಿದ್ದ ಕಾರಿನಲ್ಲಿ (Car) ಏಕಾಏಕಿ ಬೆಂಕಿ (Fire Accident) ಕಾಣಿಸಿಕೊಂಡ ಪರಿಣಾಮ ಕಾರು ಸುಟ್ಟು ಭಸ್ಮವಾದ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರು (Hiriyuru) ನಗರದ ಹೊರವಲಯದಲ್ಲಿ ನಡೆದಿದೆ.

ಹಿರಿಯೂರು ನಗರದ ವಿವಿ ಸಾಗರ ರಸ್ತೆ ಬಳಿಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಸುಟ್ಟುಹೋದ ಕಾರು ಹೊನ್ನಾಳ್ಳಿ ಮೂಲದ ರಮೇಶ್ ಆಚಾರಿ ಎನ್ನುವವರಿಗೆ ಸೇರಿದ್ದು ಎನ್ನಲಾಗಿದೆ. ಕಾರು ಚಲಿಸುತ್ತಿದ್ದ ವೇಳೆ ದಿಢೀರ್ ಕಾಣಿಸಿಕೊಂಡ ಬೆಂಕಿಯಿಂದಾಗಿ ಎಚ್ಚೆತ್ತ ಕಾರಿನ ಚಾಲಕ ರಸ್ತೆಬದಿಗೆ ಕಾರು ನಿಲ್ಲಿಸಿ ಕೆಳಗಿಳಿದಿದ್ದಾರೆ. ಇದನ್ನೂ ಓದಿ: ದೇವರ ಪ್ರಸಾದ ತಿಂದು ನೂರಾರು ಜನ ಅಸ್ವಸ್ಥ – ಓರ್ವ ಮಹಿಳೆ ಸಾವು

ಇನ್ನು ಬೆಂಕಿ ಕಾಣಿಸಿಕೊಳ್ಳುವ ಮುನ್ನ ಹೊಗೆಯಿಂದಾಗಿ ಎಚ್ಚೆತ್ತ ಚಾಲಕ ಕಾರಿನಿಂದ ಇಳಿದ ಪರಿಣಾಮ, ಪ್ರಾಣಪಾಯದಿಂದ ಪಾರಾಗಿದ್ದಾರೆ. ದಾವಣಗೆರೆಯಿಂದ (Davangere) ಬೆಂಗಳೂರು (Bengaluru) ಕಡೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕೂಡಲೇ ಸ್ಥಳೀಯರು ಅಗ್ನಿಶಾಮಕದಳಕ್ಕೆ ವಿಷಯ ತಿಳಿಸಿದ್ದು, ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಗೆಳತಿ ಮೇಲೆ ಪ್ರೀತಿ; ಲಿಂಗ ಬದಲಿಸಿಕೊಂಡ್ರೂ ಮದುವೆಗೆ ಒಪ್ಪದ ಮಹಿಳಾ ಟೆಕ್ಕಿಯನ್ನ ಜೀವಂತ ಸುಟ್ಟು ಹತ್ಯೆ

Share This Article