ಎಕ್ಸ್‌ಪ್ರೆಸ್‌ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಸರ್ವಿಸ್ ರಸ್ತೆಗೆ ಉರುಳಿದ ಕಾರು

By
1 Min Read

– ಕೇರಳ ಮೂಲದ ಕುಟುಂಬಕ್ಕೆ ಸಣ್ಣಪುಟ್ಟ ಗಾಯ

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ (Expressway) ನಿಯಂತ್ರಣ ತಪ್ಪಿದ ಕಾರೊಂದು (Car) ಡಿವೈಡರ್‌ಗೆ ಡಿಕ್ಕಿ ಹೊಡೆದು ಸರ್ವಿಸ್ ರಸ್ತೆಗೆ (Service Road) ಉರುಳಿ ಬಿದ್ದ ಘಟನೆ ಚನ್ನಪಟ್ಟಣ (Channapatna) ತಾಲೂಕಿನ ಚೋಳಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ.

ಮೈಸೂರು (Mysuru) ಕಡೆಯಿಂದ ಬೆಂಗಳೂರು (Bengaluru) ಕಡೆಗೆ ಹೊರಟಿದ್ದ ಕಾರು ವೇಗವಾಗಿ ಬಂದ ಪರಿಣಾಮ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಸರ್ವಿಸ್ ರಸ್ತೆಗೆ ಉರುಳಿಬಿದ್ದ ಕಾರು, ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ ಕೇರಳ ಮೂಲದ ಕುಟುಂಬಕ್ಕೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಇಬ್ಬರು ಮಕ್ಕಳು ಸೇರಿ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಕೋಟಿ ಕೋಟಿ ಮೌಲ್ಯದ 5,13,400 ಸಿಗರೇಟ್‌ ಸೀಜ್‌

ಇನ್ನು ಅದೇ ಮಾರ್ಗದಲ್ಲಿ ಬರುತ್ತಿದ್ದ ಮೈಸೂರಿನ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ (MK Somashekar) ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಅಂಬುಲೆನ್ಸ್ ಕರೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಸಂಬಂಧ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್

Share This Article