ಡಿಕೆಶಿ ವಿರುದ್ಧ ಹೈಕಮಾಂಡ್ ಕ್ರಮ ತೆಗೆದುಕೊಳ್ಳುತ್ತಾ: ಛಲವಾದಿ ನಾರಾಯಣಸ್ವಾಮಿ

Public TV
1 Min Read

ಬೆಂಗಳೂರು: ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ (D K Shivakumar) ವಿರುದ್ಧ ಕಾಂಗ್ರೆಸ್ (Congress) ಹೈಕಮಾಂಡ್ ಕ್ರಮ ತೆಗೆದುಕೊಳ್ಳುತ್ತಾ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalawadi Narayanaswamy) ಪ್ರಶ್ನಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಡಿಕೆಶಿ ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿದ್ದಾರೆ. ಮುಸ್ಲಿಮರಿಗೆ ಮೀಸಲಾತಿ ಕೊಡಲು ಸಾಧ್ಯವಿಲ್ಲ ಎಂದು ಗೊತ್ತಿದ್ದರೂ ವೋಟ್ ಬ್ಯಾಂಕ್‌ಗಾಗಿ ಬಿಲ್ ತಂದಿದ್ದಾರೆ. ಕಾಂಗ್ರೆಸ್ ಮುಸ್ಲಿಮರಿಗೆ ಅನ್ಯಾಯ ಮಾಡುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ್ದ ಡಿಕೆಶಿ ರಾಜೀನಾಮೆ ನೀಡಬೇಕು: ಆರ್.ಅಶೋಕ್

ನಮ್ಮಲ್ಲಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಅಂದವರಿಗೆ ನಾವು ಟಿಕೆಟ್ ಕೊಟ್ಟಿಲ್ಲ. ಈಗ ಡಿಕೆಶಿ ವಿರುದ್ಧ ಕ್ರಮ ಆಗಬೇಕು ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹಿಸಿದರು. ಇದನ್ನೂ ಓದಿ: ನನ್ನ, ಹೆಚ್‌ಡಿಕೆ ಫೋನ್ ಟ್ಯಾಪಿಂಗ್ ಈಗಲೂ ನಡೆಯುತ್ತಿದೆ: ಅಶೋಕ್ ಬಾಂಬ್

ಸಂವಿಧಾನ ಬದಲಾವಣೆ ಮಾಡುತ್ತೇನೆ ಎಂದು ಹೇಳಿ, ಈಗ ನಾನು ಹಾಗೆ ಹೇಳೇ ಇಲ್ಲ ಎನ್ನುತ್ತಿದ್ದಾರೆ. ಮಾಧ್ಯಮದಲ್ಲಿ ಎಲ್ಲರೂ ನೋಡಿದ್ದಾರೆ. ಅವರು ಸಂವಿಧಾನ ಬದಲಾವಣೆ ಬಗ್ಗೆ ಮಾತಾಡಿದ್ದಾರೆ. ಮಾತಾಡಿದರು ಈಗ ಬಿಜೆಪಿ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಜೈ ಭೀಮ್, ಜೈ ಬಾಪು, ಜೈ ಸಂವಿಧಾನ ಕಾಂಗ್ರೆಸ್ ಪಕ್ಷದ ನಿರ್ಣಯ: ಪರಮೇಶ್ವರ್

Share This Article