ಇಂದೇ ಅಯೋಧ್ಯೆಗೆ ತೆರಳಲಿದೆ ದೊಡ್ಡಗೌಡರ ಕುಟುಂಬ

Public TV
1 Min Read

ಬೆಂಗಳೂರು: ಅಯೋಧ್ಯೆಯಲ್ಲಿ (Ayodhya) ನಡೆಯಲಿರುವ ರಾಮಲಲ್ಲಾ (Ram Lalla) ಪ್ರಾಣಪ್ರತಿಷ್ಠಾಪನೆಯಲ್ಲಿ ಪಾಲ್ಗೊಳ್ಳಲು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (HD Deve Gowda) ಕುಟುಂಬ ಸಮೇತರಾಗಿ ಅಯೋಧ್ಯೆಗೆ ತೆರಳಲಿದ್ದಾರೆ.

ಜನವರಿ 22ರಂದು ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ನಡೆಯಲಿದ್ದು, ಸಕಲ ಸಿದ್ಧತೆಗಳೊಂದಿಗೆ ಪೂಜಾ ಕೈಂಕರ್ಯಗಳು ಈಗಾಗಲೇ ಆರಂಭಗೊಂಡಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಮಾಜಿ ಪ್ರಧಾನಿ ಹೆಚ್‌ಡಿಡಿ ಇಂದು (ಜ.21) ಪತ್ನಿ ಚೆನ್ನಮ್ಮ, ಪುತ್ರ ಹೆಚ್.ಡಿ ಕುಮಾರಸ್ವಾಮಿ, ಸೊಸೆ ಅನಿತಾ ಕುಮಾರಸ್ವಾಮಿ ಹಾಗೂ ಮೊಮ್ಮಗ ನಿಖಿಲ್ ಕುಮಾರಸ್ವಾಮಿಯವರೊಂದಿಗೆ ಅಯೋಧ್ಯೆಯತ್ತ ಪ್ರಯಾಣ ಬೆಳೆಸುತ್ತಿದ್ದಾರೆ. ಇದನ್ನೂ ಓದಿ: ಸಿಎಂ ತವರಲ್ಲಿ ಶ್ರೀರಾಮನ ಹೆಸರಿನ ಲಕ್ಷ ದೀಪೋತ್ಸವಕ್ಕೆ ಅನುಮತಿ ರದ್ದು – ರಾಮಭಕ್ತರಿಂದ ಆಕ್ಷೇಪ

ವಿಶೇಷ ವಿಮಾನದಲ್ಲಿ ಕುಟುಂಬ ಸಮೇತರಾಗಿ ಹೆಚ್‌ಡಿಡಿ ಪ್ರಯಾಣ ಮಾಡಲಿದ್ದು, ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಮೂಲಕ ಶ್ರೀರಾಮನ ಕೃಪೆಗೆ ಪಾತ್ರರಾಗಲಿದ್ದಾರೆ. ಇದನ್ನೂ ಓದಿ: ಪ್ರಾಣಪ್ರತಿಷ್ಠೆ ಸಮಯಕ್ಕೆ ಮೈಸೂರಿನಲ್ಲೂ ವಿಶೇಷ ಪೂಜೆ – ಶ್ರೀರಾಮನಿಗೆ ಸಪ್ತ ನದಿಗಳ ನೀರಿನಿಂದ ಜಲಾಭೀಷೇಕ!

Share This Article