ರಾಜ್ಯದಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿ – ಡೆಂಗ್ಯೂ ನಡುವೆ ಹೆಚ್ಚಾಯ್ತು ಟೆನ್ಷನ್!

Public TV
1 Min Read

ಹಾವೇರಿ: ಸದ್ಯ ಡೆಡ್ಲಿ ಡೆಂಗ್ಯೂ (Dengue) ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಹೊತ್ತಿನಲ್ಲೇ ಇಲಿ ಜ್ವರದಿಂದ (Rat Fever) ಹಾವೇರಿಯ (Haveri) ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಇದು ಇಲಿಜ್ವರಕ್ಕೆ ರಾಜ್ಯದಲ್ಲಿ ಸಂಭವಿಸಿದ ಮೊದಲ ಬಲಿಯಾಗಿದೆ.

ಹಾವೇರಿ ಜಿಲ್ಲೆಯ ಹಾನಗಲ್ (Hangal) ತಾಲೂಕಿನ ಅರಳೇಶ್ವರ ಗ್ರಾಮದ ವೃದ್ಧ ಉಮೇಶ್ (72) ಇಲಿಜ್ವರದಿಂದ ಸಾವನ್ನಪ್ಪಿದ್ದಾರೆ. 15 ದಿನಗಳಿಂದ ಹಾವೇರಿ, ಮಂಗಳೂರು ಸೇರಿ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳೂರಿನಲ್ಲಿ ರಕ್ತ ಪರೀಕ್ಷೆ ಬಳಿಕ ಇಲಿ ಜ್ವರ ಇರುವುದು ಪತ್ತೆಯಾಗಿದೆ. ಇದನ್ನೂ ಓದಿ: 20 ವರ್ಷದಲ್ಲಿ ನಾನು ಎಂದೂ ಮದ್ಯ ಹಂಚಿ ರಾಜಕಾರಣ ಮಾಡಿಲ್ಲ: ಡಾ.ಕೆ.ಸುಧಾಕರ್

ವೃದ್ಧ ಕಿಡ್ನಿ ವೈಫಲ್ಯದೊಂದಿಗೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 2 ದಿನ ಚಿಕಿತ್ಸೆ ಪಡೆದ ನಂತರ ವೃದ್ಧ ಮೃತಪಟ್ಟಿದ್ದಾರೆ. ಇದರಿಂದ ಹಾವೇರಿ ಜಿಲ್ಲೆ ಜನರಲ್ಲಿ ಆತಂಕ ಮನೆಮಾಡಿದೆ. ಇದನ್ನೂ ಓದಿ: ಅಸ್ಸಾಂನಲ್ಲಿ ಭೀಕರ ಪ್ರವಾಹ – ಕಾಜಿರಂಗ ಪಾರ್ಕ್‍ನಲ್ಲಿ 131 ವನ್ಯಜೀವಿಗಳು ಸಾವು

12 ವರ್ಷದ ಬಾಲಕನಲ್ಲಿ ಮೊದಲ ಕೇಸ್ ಪತ್ತೆ:
ಕಳೆದ ಒಂದು ದಿನದ ಹಿಂದೆಯಷ್ಟೇ ಹಾವೇರಿಯಲ್ಲಿ ಇಲಿ ಜ್ವರ ಪತ್ತೆಯಾಗಿತ್ತು. ಹಾವೇರಿ ಜಿಲ್ಲೆಯ 12 ವರ್ಷದ ಬಾಲಕನಲ್ಲಿ ಇಲಿ ಜ್ವರ ಕಾಣಿಸಿಕೊಂಡಿತ್ತು. ಬಾಲಕನಿಗೆ ಕಳೆದ ಒಂದು ವಾರದಿಂದ ನಿರಂತರವಾಗಿ ಜ್ವರ ಕಾಣಿಸಿಕೊಂಡ ಹಿನ್ನಲೆ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಬಾಲಕನಿಗೆ ಜಾಂಡೀಸ್ ಕಾಣಿಸಿಕೊಂಡಿತ್ತು. ಬಳಿಕ ರೋಗ ಗುಣಮುಖಗೊಂಡ ಹಿನ್ನೆಲೆ ಚಿಕಿತ್ಸೆ ಪಡೆದು ಊರಿಗೆ ತೆರಳಿದ್ದ. ಮತ್ತೆ ಬಾಲಕನಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಇಲಿ ಜ್ವರ ಇರುವುದು ಪತ್ತೆಯಾಗಿತ್ತು. ಇದನ್ನೂ ಓದಿ: ರಾಹುಲ್‌ ಗಾಂಧಿಗೆ ಸಂಸತ್ತಿನೊಳಗೇ ಹೋಗಿ ಕೆನ್ನೆಗೆ ಬಾರಿಸಬೇಕು: ಭರತ್‌ ಶೆಟ್ಟಿ ಕೆಂಡಾಮಂಡಲ

Share This Article