ಮದ್ಯ ಸೇವಿಸಲು ಹಣ ಕೊಡದ್ದಕ್ಕೆ ತಲೆ ಮೇಲೆ ಕಲ್ಲು ಎತ್ತಾಕಿದ ಪತಿ- ಕೋಮಾಗೆ ಜಾರಿದ ಪತ್ನಿ

Public TV
1 Min Read

ದಾವಣಗೆರೆ: ಮದ್ಯ ಸೇವನೆಗೆ ಪತ್ನಿ ಹಣ ಕೊಡಲು ನಿರಾಕರಿಸಿದ್ದಕ್ಕೆ ಪತಿಯೇ (Husband) ತಲೆ ಮೇಲೆ ಕಲ್ಲು ಎತ್ತಿಹಾಕಿ ಪತ್ನಿಯನ್ನ (Wife) ಹಲ್ಲೆ ಮಾಡಿರುವ ಘಟನೆ ಚನ್ನಗಿರಿ ತಾಲೂಕಿನ ಗುಡ್ಡದ ಕೊಮರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚಿತ್ರದುರ್ಗ (Chitradurga)  ಜಿಲ್ಲೆ ಹಿರಿಯೂರು ತಾಲೂಕು ಇದ್ದಲ ನಾಗೇನಹಳ್ಳಿ ಗ್ರಾಮದ ಕದರಪ್ಪ (60) ಹಲ್ಲೆ ನಡೆಸಿದ ಆರೋಪಿ. ಪತಿ ಮಾಡಿರುವ ಹಲ್ಲೆಯಿಂದ ತೀವ್ರ ಗಾಯಗೊಂಡ ಮಹಿಳೆ ಸಾಕಮ್ಮ (55) ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಎಸ್‌ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಸ್ತುತ ಅವರು ಕೋಮಾ ಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಸಿಲಿಂಡರ್ ಸ್ಫೋಟ – ಇಬ್ಬರ ದಾರುಣ ಸಾವು, ಮೂವರ ಸ್ಥಿತಿ ಗಂಭೀರ

ದಂಪತಿ ಹಲವು ವರ್ಷಗಳಿಂದ ಬಡಗೊಲ್ಲರಹಟ್ಟಿ, ಸೀಗೆಹಟ್ಟಿ ಗ್ರಾಮದವರ ಜೊತೆಗೂಡಿ ಕುರಿಗಳನ್ನು ಮೇಯಿಸುತ್ತಿದ್ದರು. ಅದರಂತೆಯೇ ಕುರಿಗಳನ್ನು ಮೇಯಿಸಲು ಚನ್ನಗಿರಿ ತಾಲೂಕಿನ ಗುಡ್ಡದ ಕೊಮರನಹಳ್ಳಿ ಗ್ರಾಮ ಸೇರಿ ಸುತ್ತಲ ಗ್ರಾಮಗಳಲ್ಲಿ ವಾರದಿಂದ ತೋಟವೊಂದರಲ್ಲಿ ತಂಗಿದ್ದರು. ಮದ್ಯ ವ್ಯಸನಿಯಾಗಿದ್ದ ಆರೋಪಿ ಕದರಪ್ಪ, ಹಣ ನೀಡುವಂತೆ ಪತ್ನಿ ಸಾಕಮ್ಮನನ್ನು ಪದೆ ಪದೇ ಪೀಡಿಸುತ್ತಿದ್ದನು. ಇದನ್ನೂ ಓದಿ: ʻJEE ಮಾಡೋಕಾಗಲ್ಲ, ನಾನು ಕೆಟ್ಟ ಮಗಳು, ಇದೇ ನನ್ನ ಕೊನೇ ಆಯ್ಕೆʼ – ಡೆತ್‌ನೋಟ್‌ ಬರೆದಿಟ್ಟು ಯುವತಿ ಆತ್ಮಹತ್ಯೆ!

ಪತ್ನಿ ಹಣ ನೀಡಲು ನಿರಾಕರಿಸಿದ್ದಕ್ಕೆ ಇನ್ನಷ್ಟು ಕೋಪಗೊಂಡ ಕದರಪ್ಪ ಅಲ್ಲೇ ಇದ್ದ ಕಲ್ಲನ್ನು ತಲೆಮೇಲೆ ಎತ್ತಿಹಾಕಿ ಪರಾರಿಯಾಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಾಕಮ್ಮ ಅವರನ್ನು ಕಂಡ ಬಡಗೊಲ್ಲರಹಟ್ಟಿ ಮತ್ತು ಸೀಗೆಹಟ್ಟಿ ಕುರಿ ಕಾಯುವವರು ತಕ್ಷಣವೇ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಾಕಮ್ಮ ಮಗ ದಯಾನಂದ ಬಸವಾಪಟ್ಟಣ ಪೊಲೀಸ್ ಠಾಣೆಗೆ ತಂದೆ ಮೇಲೆ ದೂರು ನೀಡಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ. ಆರೋಪಿ ಕದರಪ್ಪನಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಆಶ್ರಯ ಕೊಟ್ಟ ಭಾರತೀಯ ವಿದ್ಯಾರ್ಥಿಯನ್ನೇ ಹೊಡೆದು ಕೊಂದ ಯುಎಸ್ ನಿರಾಶ್ರಿತ ವ್ಯಕ್ತಿ!

Share This Article