ಜಮೀರ್ ಅಹಮ್ಮದ್ ಮುಂದೆ ಕಣ್ಣೀರು ಹಾಕಿದ ಗುಡಿಸಲು ವಾಸಿಗಳು

Public TV
2 Min Read

ಬೆಂಗಳೂರು: ಸೂರು ಕಲ್ಪಿಸಲು ವಸತಿ ಸಚಿವರ ಮುಂದೆ ಮಹಿಳೆಯರು ಕಣ್ಣೀರು ಹಾಕಿದ ಘಟನೆ ಹೆಬ್ಬಾಳದ ಕುಂತಿ ನಗರದಲ್ಲಿ ನಡೆದಿದೆ.

ಜಮೀರ್ ಅಹಮ್ಮದ್ ಖಾನ್‌ (Zameer Ahmed Khan) ಅಧಿಕಾರಿಗಳ ಜೊತೆ ಭೇಟಿ ನೀಡಿದಾಗ ಕೈಮುಗಿದು ಗೋಗರೆದ ಹಿರಿಯ ನಾಗರಿಕರು, ಶೆಡ್ ಗಳಲ್ಲಿ ಇಲಿ -ಹೆಗ್ಗಣ ಕಾಟದ ನಡುವೆ ರಾತ್ರಿ ಇಡೀ ಜಾಗರಣೆ ಮಾಡುವಂತಾಗಿದೆ ಎಂದು ಅಲವತ್ತುಕೊಂಡರು.

ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ರೂಪಿಸಿರುವ ಪ್ರಧಾನ ಮಂತ್ರಿ ಅವಾಸ್ ವಸತಿ ಯೋಜನೆ ಎರಡು ವರ್ಷ ಆದರೂ ಪೂರ್ಣಗೊಂಡಿಲ್ಲ. ಗುಣಮಟ್ಟದ ಮನೆ ಕಟ್ಟಿಕೊಡುತ್ತಿದ್ದಾರೆ. ಕೂಲಿ ಮಾಡಿ ಜೀವನ ಮಾಡುತ್ತಿದ್ದೇವೆ. ಜೀವನ ನಡೆಸಲು ಊಟ ತಿಂಡಿಗೆ ಕಷ್ಟ ಆಗುತ್ತಿದೆ. ಫಲಾನುಭವಿ ವಂತಿಗೆ ಮೂರೂವರೆಯಿಂದ ನಾಲ್ಕು ಲಕ್ಷದವರೆಗೆ ಪಾವತಿ ಮಾಡಲು ಆಗುತ್ತಿಲ್ಲ. ನಮಗೆ ದಯವಿಟ್ಟು ಮನೆ ಕಟ್ಟಿಕೊಡಿ ಎಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: 4 ಸ್ಥಾನ ಬಿಟ್ಟುಕೊಡಲು ಅಮಿತ್ ಶಾ ಒಪ್ಪಿಗೆ- ಮೈತ್ರಿ ಖಚಿತತೆ ಬಗ್ಗೆ BSY ಸುಳಿವು

ಸ್ಥಳೀಯ ವಾಸಿಗಳಾದ ನೇತ್ರ, ಅಣ್ಣಿ ಯಮ್ಮ, ಮುತ್ಯಾ ಲಮ್ಮ, ವೆಂಕಟೇಶ್ ಅವರು ನಮ್ಮ ಜೀವನ ರಸ್ತೆಗೆ ಬಂದಿದೆ. ಮಕ್ಕಳಿಗೆ ವಿದ್ಯೆ ಕಲಿಸಲು ಆಗುತ್ತಿಲ್ಲ. ಆರೋಗ್ಯ ಸಮಸ್ಯೆ ಎಂದರೆ ಚಿಕಿತ್ಸೆ ಗೆ ಹಣ ಇಲ್ಲದಂತಾಗಿದೆ ಎಂದು ಕಣ್ಣೀರು ಹಾಕಿದರು. ಪೇಪರ್ ಹಾಕುವುದು, ಮನೆ ಕೆಲಸ, ರಸ್ತೆ ಬದಿ ಚಪ್ಪಲಿ ಹೊಲಿದು ಜೀವನ ಸಾಗಿಸುತ್ತಿದ್ದೇವೆ ಎಂದು ಹೇಳಿದರು. ಸಚಿವರು ಇದೇ ವೇಳೆ ಸರ್ವಜ್ಞ ಕ್ಷೇತ್ರದ ಚಟ್ಟಪ್ಪ ಗಾರ್ಡನ್, ಬಸವ ನ ಗುಡಿಯ ಚಾಮುಂಡಿ ನಗರ ಕೊಳೆಗೇರಿ ಗೂ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್, ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಕೊಳೆಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ಬಿ. ವೆಂಕಟೇಶ್, ಪ್ರಧಾನ ಅಭಿಯಂತರ ಬಾಲರಾಜು ಉಪಸ್ಥಿತರಿದ್ದರು.

ಕುಂತಿ ನಗರ ಕೊಳೆಗೇರಿಯಲ್ಲಿ 402 ಮನೆ 31 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ಪ್ರತಿ ಮನೆಗೆ 7 ಲಕ್ಷ ರೂ. ವೆಚ್ಚ ಆಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಎಸ್ ಸಿ ಎಸ್ ಟಿ ವರ್ಗಕ್ಕೆ 3.50 ಲಕ್ಷ ರೂ., ಸಾಮಾನ್ಯ ವರ್ಗಕ್ಕೆ 2.70 ಲಕ್ಷ ರೂ. ಸಬ್ಸಿಡಿ ಸಿಗುತ್ತಿದ್ದು ಉಳಿದದ್ದು ಫಲಾನುಭವಿ ಕಟ್ಟಬೇಕು. ಆದರೆ ವಂತಿಗೆ ಪಾವತಿ ಆಗದೆ ಮನೆ ಅರ್ಧ ಕ್ಕೆ ನಿಂತಿವೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್