ಕಾಶ್ಮೀರಿ ಪಂಡಿತರ ಹತ್ಯೆಗೆ ಕಾರಣನಾಗಿದ್ದರೆ ನನ್ನನ್ನು ನೇಣಿಗೇರಿಸಿ: ಫಾರೂಕ್ ಅಬ್ದುಲ್ಲಾ

By
2 Min Read

ನವದೆಹಲಿ: 1990ರ ದಶಕದಲ್ಲಿ ನಡೆದ ಕಾಶ್ಮೀರಿ ಪಂಡಿತರ ವಲಸೆ ಹಾಗೂ ಹತ್ಯೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ಕೈಗೊಳ್ಳಲು ಪ್ರಾಮಾಣಿಕ ನ್ಯಾಯಾಧೀಶರ ಸಮಿತಿಯನ್ನು ರಚಿಸುವಂತೆ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಮನವಿ ಮಾಡಿದ್ದಾರೆ.

`ದಿ ಕಾಶ್ಮೀರ್ ಫೈಲ್ಸ್’ ಕುರಿತು ಪ್ರತಿಕ್ರಿಯಿಸಿರುವ ಅವರು ತನಿಖೆ ನಡೆಸಿದರಷ್ಟೇ ಸತ್ಯ ಹೊರಬೀಳಲಿದೆ ಎಂದಿದ್ದಾರೆ. ಈ ಬಗ್ಗೆ ಸತ್ಯ ತಿಳಿದುಕೊಳ್ಳಲು ಇಚ್ಛಿಸುವವರು, ಆ ಸಮಯದಲ್ಲಿ ಗುಪ್ತಚರ ಇಲಾಖೆ ಮುಖ್ಯಸ್ಥನಾಗಿದ್ದವರ ಬಳಿ ಮಾತನಾಡಬೇಕು. ಇಲ್ಲವೇ ಕೇರಳದ ಈಗಿನ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನೂ ಕೇಳಬಹುದು. ಆ ಸಮಯದಲ್ಲಿ ಅವರು ಕೇಂದ್ರ ಸಚಿವರಾಗಿದ್ದರು.

ಕಾಶ್ಮೀರಿ ಪಂಡಿತರ ಮೇಲಿನ ದೌರ್ಜನ್ಯಕ್ಕೆ ನನ್ನನ್ನೇ ಹೊಣೆ ಎಂದು ಬಿಂಬಿಸಲಾಗುತ್ತಿದೆ. ಇದು ಸುಳ್ಳು. ಕಾಶ್ಮೀರಿ ಪಂಡಿತರ ದುರಂತಕ್ಕೆ ಫಾರೂಕ್ ಅಬ್ದುಲ್ಲಾರೇ ಹೊಣೆ ಎಂಬುದು ಸತ್ಯವಾದರೆ, ಈ ದೇಶದ ಯಾವುದೇ ಮೂಲೆಗೆ ಕರೆದುಕೊಂಡು ಹೋಗಿ ನೇಣಿಗೇರಿಸಿದರೂ ಅದಕ್ಕೆ ನಾನು ಸಿದ್ಧನಿದ್ದೇನೆ. ತನಿಖೆಯಾಗಲಿ, ಅದು ಬಿಟ್ಟು ಸುಮ್ಮನೆ ಯಾರನ್ನೋ ಹೊಣೆ ಮಾಡಬಾರದು ಎಂದು ಎಂದು ಕಿಡಿಕಾರಿದ್ದಾರೆ.

ಕಾಶ್ಮೀರಿ ಪಂಡಿತರ ಹತ್ಯಾಕಾಂಡ, ವಲಸೆ ಕಥಾಹಂದರ ಇರುವ `ದಿ ಕಾಶ್ಮೀರ ಫೈಲ್ಸ್’ ಸಿನಿಮಾ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಬಿಜೆಪಿ ಆಡಳಿತದಲ್ಲೇ ಇರುವ ಕೆಲವು ಸರ್ಕಾರಗಳು ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸುತ್ತಿದ್ದು, ಈ ಮೂಲಕ ಜನರ ಹೃದಯದಲ್ಲಿ ನಮ್ಮ ಬಗ್ಗೆ ಇನ್ನಷ್ಟು ದ್ವೇಷ ಹುಟ್ಟುವಂತೆ ಮಾಡುತ್ತಿವೆ. ಅಲ್ಲದೆ, ಪ್ರತಿಯೊಬ್ಬರೂ ಸಿನಿಮಾ ನೋಡಿ ಎಂದು ಕರೆ ನೀಡಲಾಗುತ್ತಿದ್ದು, ಪ್ರತಿಯೊಬ್ಬ ಯೋಧ, ಪೊಲೀಸ್ ಸಹ ದಿ ಕಾಶ್ಮೀರ್ ಫೈಲ್ಸ್ ನೋಡಬೇಕು ಎಂದು ಸಾರಲಾಗುತ್ತಿದೆ. ಇದರಿಂದಾಗಿ ಜನರಿಗೆ ಮುಸ್ಲಿಮರ ಬಗ್ಗೆ ಇನ್ನಷ್ಟು ದ್ವೇಷ ಹುಟ್ಟಿಕೊಳ್ಳುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಡಾ.ರಾಜ್ ಕುಮಾರ್ ಮತ್ತು ಡಾ.ಪುನೀತ್ ರಾಜ್ ಕುಮಾರ್ : ಫೋಟೋ ವೈರಲ್

ದಿ ಕಾಶ್ಮೀರಿ ಫೈಲ್ಸ್ ಪ್ರಚಾರಕ್ಕಾಗಿ ಮಾಡಲಾದ ಸಿನಿಮಾ. ಇದು ಪ್ರತಿ ರಾಜ್ಯದ ಹಿಂದು-ಮುಸ್ಲಿಮರನ್ನು ಬಾಧಿಸುತ್ತದೆ. ಅಂದಿನ ದುರಂತ ನೆನಪಿಸಿಕೊಂಡರೆ ಇಂದಿಗೂ ಭಯವಾಗುತ್ತದೆ. ಜನಾಂಗೀಯ ನಿರ್ಮೂಲನೆಯಲ್ಲಿ ಆಸಕ್ತಿಹೊಂದಿದ್ದ ರಾಜಕೀಯ ಪಕ್ಷಗಳ ಪಾತ್ರ ಆ ದುರ್ಘಟನೆಯಲ್ಲಿ ಜಾಸ್ತಿ ಇದೆ ಎಂದು ವಿಶ್ಲೇಷಿಸಿದ್ದಾರೆ. ಇದನ್ನೂ ಓದಿ: ಮಂಗಳೂರಿನ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ

Share This Article
Leave a Comment

Leave a Reply

Your email address will not be published. Required fields are marked *