ಬಾಕ್ಸ್ ಆಫೀಸ್ ಬಾಚುತ್ತಿರುವ ದಿ ಕೇರಳ ಸ್ಟೋರಿ : 7 ದಿನಕ್ಕೆ ₹80 ಕೋಟಿ ಕಲೆಕ್ಷನ್

Public TV
2 Min Read

ದಾ ಶರ್ಮಾ ನಟನೆಯ ‘ದಿ ಕೇರಳ ಸ್ಟೋರಿ’ ಬಾಕ್ಸ್ ಆಫೀಸಿನಲ್ಲಿ ದಾಖಲೆ ಕಲೆಕ್ಷನ್ ಕಲೆ ಹಾಕುತ್ತಿದೆ. ರಿಲೀಸ್ ಆದ 7 ದಿನಕ್ಕೆ ಬರೋಬ್ಬರಿ 80 ಕೋಟಿ ರೂಪಾಯಿ ಬಾಚುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸುತ್ತಿದೆ. ಈ ಪ್ರಮಾಣದಲ್ಲಿ ದಿ ಕೇರಳ ಸ್ಟೋರಿ ಗೆಲ್ಲುತ್ತಿದ್ದಂತೆಯೇ ಅದಾ ಶರ್ಮಾಗೆ ಭರ್ಜರಿ ಆಫರ್ಸ್ ಬರುತ್ತಿವೆ. ಅಲ್ಲದೇ, ಅನೇಕ ಸಂಘಟನೆಗಳು ಸಿನಿಮಾವನ್ನು ಉಚಿತವಾಗಿ ತೋರಿಸುವ ಮೂಲಕ ಬಾಕ್ಸ್ ಆಫೀಸಿಗೆ ಆದಾಯ ಹರಿದು ಬರುವಂತೆ ಮಾಡುತ್ತಿದ್ದಾರೆ.

ಎರಡು ರಾಜ್ಯಗಳಲ್ಲಿ ನಿಷೇಧ ಹೇರಿದ್ದರೂ, ಸ್ವತಃ ಕೇರಳದಲ್ಲೇ ಸಿನಿಮಾ ಪ್ರದರ್ಶನಕ್ಕೆ ನಾನಾ ಅಡತಡೆಗಳನ್ನು ಒಡ್ಡಿದ್ದರೂ ಅದು ಹೇಗೆ ಐದೇ ದಿನಕ್ಕೆ ಐವತ್ತು ಕೋಟಿ ಕಲೆಕ್ಷನ್ ಆಗೋಕೆ ಸಾಧ್ಯ ಎಂದು ಹಲವರು ಪ್ರಶ್ನಿಸಿದ್ದಾರೆ. ಈ ವಿಷಯವನ್ನು ಸೋಷಿಯಲ್ ಮೀಡಿಯಾದಲ್ಲೂ ಚರ್ಚೆ ಮಾಡಿದ್ದಾರೆ. ಆದರೆ, ಬಾಲಿವುಡ್ ಸಿನಿ ಪಂಡಿತರ ಲೆಕ್ಕಾಚಾರವೇ ಬೇರೆ ಇದೆ. ಮೂರು ರಾಜ್ಯಗಳಲ್ಲಿ ತೆರಿಗೆ ವಿನಾಯಿತಿ ಘೋಷಣೆ ಮಾಡಿರುವುದರಿಂದ ಐವತ್ತು ಕೋಟಿ ರೂಪಾಯಿ ಗಳಿಸಲು ಸಾಧ್ಯ ಎಂದು ಹೇಳಲಾಗುತ್ತಿದೆ.

ಸಿನಿಮಾ ಮೊದಲ ದಿನ ಸಾಧಾರಣ ಓಪನಿಂಗ್ ಪಡೆದುಕೊಂಡಿದ್ದರೂ, ಮುಂದಿನ ದಿನಗಳಲ್ಲಿ ಅಚ್ಚರಿ ಎನ್ನುವಂತೆ ದುಡ್ಡು ಬಾಕ್ಸ್ ಆಫೀಸಿಗೆ ಹರಿದು ಬಂದಿದೆ. ಶುಕ್ರವಾರ 8.03 ಕೋಟಿ ರೂ. ಶನಿವಾರ 11.22 ಕೋಟಿ ರೂ. ಭಾನುವಾರ 16 ಕೋಟಿ ರೂ. ಸೋಮವಾರ 10.07 ಕೋಟಿ ರೂ. ಮಂಗಳವಾರ 11.14 ಕೋಟಿ ರೂ. ಬುಧವಾರ 12 ಕೋಟಿ ರೂ. ಶುಕ್ರವಾರ ಕೂಡ ಅಂದಾಜು 12 ಕೋಟಿ ರೂಪಾಯಿ  ಸೇರಿ ಭಾರತದಲ್ಲೇ ಏಳು ದಿನಕ್ಕೆ 80.86 ಕೋಟಿ ಗಳಿಕೆ ಮಾಡಿದೆ. ಇದನ್ನೂ ಓದಿ:ಕಾಲು ಒರೆಸುವ ಬಟ್ಟೆಯಂತೆ ಬಳಸಿಕೊಂಡಿದ್ದರು- ಮಾಜಿ ಬಾಯ್‌ಫ್ರೆಂಡ್‌ಗಳ ಬಗ್ಗೆ ಪ್ರಿಯಾಂಕಾ ಮಾತು

ಈ ಖುಷಿಯ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಚಿತ್ರತಂಡಕ್ಕೆ ಶಾಕ್ ಕೂಡ ನೀಡಿದೆ. ಪಶ್ಚಿಮ ಬಂಗಾಳ (West Bengal) ನಿಷೇಧಿಸಿರುವುದು ಹಾಗೂ ತಮಿಳುನಾಡಿನಲ್ಲಿ (Tamil Nadu) ನಿಷೇಧಕ್ಕೆ ಮುಂದಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ (Supreme Court) ಹೇಳಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ (CJI) ಡಿವೈ ಚಂದ್ರಚೂಡ್ (DY Chandrachud) ನೇತೃತ್ವದ ಪೀಠವು ಈ ವಿಷಯವನ್ನು ಬುಧವಾರ ತುರ್ತು ಪಟ್ಟಿಗೆ ಸೇರಿಸಿದ ನಂತರ ಮೇ 12 ರಂದು ವಿಚಾರಣೆಗೆ ಮುಂದೂಡಿದೆ. ಅಲ್ಲದೆ ನ್ಯಾಯಮೂರ್ತಿ ಪಿಎಸ್ ನರಸಿಂಹ ಅವರನ್ನೊಳಗೊಂಡ ಪೀಠವು ಚಿತ್ರದ ಬಿಡುಗಡೆಗೆ ತಡೆ ನೀಡಲು ನಿರಾಕರಿಸಿದ್ದ ಕೇರಳ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸೋಮವಾರ ಒಪ್ಪಿಕೊಂಡಿದೆ.

Share This Article