ಉಕ್ಕಿ ಹರಿಯುತ್ತಿದ್ದಾಳೆ ಕೃಷ್ಣೆ – ಕುಡಚಿಯ ಬೃಹತ್‌ ಸೇತುವೆ ಮುಳುಗಡೆ

Public TV
1 Min Read

ಬೆಳಗಾವಿ: ಕೃಷ್ಣ ನದಿಯ (Krishna River) ಆರ್ಭಟಕ್ಕೆ ಕುಡಚಿ (Kudachi) ಉಗಾರಖುರ್ದ್ ಮಧ್ಯೆ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆಯಾಗಿದ್ದು ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿ (Jamkhandi Miraj State Highway) ಸಂಪರ್ಕ ಸ್ಥಗಿತವಾಗಿದೆ.

ರಾಯಭಾಗ ತಾಲೂಕಿನಲ್ಲಿರುವ ಬೃಹತ್‌ ಕುಡಚಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದರಿಂದ ಕರ್ನಾಟಕ (Karnataka0 ಮತ್ತು ಮಹಾರಾಷ್ಟ್ರದ (Maharashtra) ಸಂಪರ್ಕ ಕಡಿತಗೊಂಡಿದೆ.

ನಿತ್ಯ ಸಾವಿರಾರು ವಾಹನಗಳು ಓಡಾಡುವ ಪ್ರಮುಖ ಹೆದ್ದಾರಿ ಇದಾಗಿದ್ದು ಸೇತುವೆ ಬಳಿ ಬ್ಯಾರಿಕೇಡ್ ಹಾಕಿ ಪೊಲೀಸರು ಸಂಚಾರ ಬಂದ್‌ ಮಾಡಿದ್ದಾರೆ.  ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ ʻಕೈʼ ಸಂಸದ ಸಸಿಕಾಂತ್ ಸೆಂಥಿಲ್ ಫಸ್ಟ್‌ ರಿಯಾಕ್ಷನ್‌

ಸದ್ಯ ಕೃಷ್ಣೆಯಲ್ಲಿ 1.50 ಲಕ್ಷ ಕ್ಯೂಸೆಕ್‌ ಒಳಹರಿವು ಇದ್ದು ಮಹಾರಾಷ್ಟ್ರ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಕ್ಷಣ ಕ್ಷಣಕ್ಕೂ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ.

ದುರ್ಗಾದೇವಿ ದೇವಸ್ಥಾನ ಜಲಾವೃತ
ಮಹಾರಾಷ್ಟ್ರ ಘಟ್ಟ ಪ್ರದೇಶಗಳಲ್ಲಿ ಮಳೆಯ ಅಬ್ಬರದಿಂದ ಹೀರಣ್ಯಕೇಶಿ, ಘಟಪ್ರಭಾ ನದಿಗಳು ಉಕ್ಕಿ ಹರಿಯುತ್ತಿದ್ದು ಘಟಪ್ರಭಾ ನದಿ ತೀರದಲ್ಲಿ ಹೈ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಹಿಡಕಲ್ ಜಲಾಶಯದಿಂದ 50 ಸಾವಿರಕ್ಕಿಂತ ಹೆಚ್ಚು ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದರಿಂದ ಕೊಟಬಾಗಿ ಗ್ರಾಮದ ಶಕ್ತಿ ಪೀಠ ದುರ್ಗಾದೇವಿ ದೇವಸ್ಥಾನ ಜಲಾವೃತಗೊಂಡಿದೆ. ಮತ್ತಷ್ಟು ನೀರು ಬಿಡುಗಡೆಯಾದರೆ ಕೊಟಬಾಗಿ ಗ್ರಾಮದ ಒಳಗೆ ನೀರು ನುಗ್ಗುವ ಸಾಧ್ಯತೆಯಿದೆ.

 

Share This Article