ಶವ ಸಂಸ್ಕಾರದ ವೇಳೆ ಕುತ್ತಿಗೆಯಲ್ಲಿ ಹಗ್ಗದ ಗುರುತು ಪತ್ತೆ – ಈಗ ಕೊಲೆ ಕೇಸ್ ದಾಖಲು

Public TV
0 Min Read

ರಾಯಚೂರು: ರಸ್ತೆಯಲ್ಲಿ ಸಾವನ್ನಪ್ಪಿದ್ದ ವ್ಯಕ್ತಿಯ ಅಂತ್ಯ ಸಂಸ್ಕಾರದ ವೇಳೆ ಕುತ್ತಿಗೆಯಲ್ಲಿ ಹಗ್ಗದ (Rope) ಗುರುತು ಪತ್ತೆಯಾದ ಘಟನೆ ದೇವದುರ್ಗ (Devadurga) ತಾಲೂಕಿನ ಸುಂಕೇಶ್ವರಹಾಳದಲ್ಲಿ (Sunkeshwarhal) ನಡೆದಿದೆ.

ಲಾಲ್ ಸಾಬ್ (33) ಸಾವಿಗೀಡಾದ ವ್ಯಕ್ತಿ. ಮೃತ ದೇಹದ ಕುತ್ತಿಗೆ ಮೇಲಿನ ಗುರುತು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದು, ಕೊಲೆ ಪ್ರಕರಣ ದಾಖಲಾಗಿದೆ. ಯಾರೋ ಕೊಲೆ ಮಾಡಿ ಶವವನ್ನು ರಸ್ತೆಗೆ ಎಸೆದು ಹೋಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಸಂಬಂಧ ಗಬ್ಬೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಅನುಮಾನದ ಮೇಲೆ ಪೊಲೀಸರು ಹಲವರನ್ನು ವಿಚಾರಣೆ ನಡೆಸಿದ್ದಾರೆ. ಪ್ರಕರಣದ ಸತ್ಯಾಸತ್ಯತೆಗಳನ್ನು ಅರಿಯಲಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Share This Article