ಬಹುನಿರೀಕ್ಷಿತ ‘ಕಲ್ಕಿ’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್

Public TV
1 Min Read

ಹುಭಾಷೆಯಲ್ಲಿ ಮೂಡಿ ಬರುತ್ತಿರುವ ಕಲ್ಕಿ ಸಿನಿಮಾದ ರಿಲೀಸ್ (Release) ಡೇಟ್ ಬಹುತೇಕ ಫಿಕ್ಸ್ ಆಗಿದೆ. ಜೂನ್ 27ರಂದು ವಿಶ್ವದಾದ್ಯಂತ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಇಂದು ಸಂಜೆ ಅಧಿಕೃತವಾಗಿ ಸಿನಿಮಾ ತಂಡವೇ ಮಾಹಿತಿಯನ್ನು ಹಂಚಿಕೊಳ್ಳಲಿದೆ.

ಈ ಸಿನಿಮಾ ಒಂದಿಲ್ಲೊಂದು ಕಾರಣದಿಂದಾಗಿ ಸುದ್ದಿ ಆಗುತ್ತಲೇ ಇದೆ. ಈ ಬಾರಿ ಕಲಾವಿದರಿಗೆ ನೀಡಿರುವ ಸಂಭಾವನೆಯಿಂದಾಗಿ (Remuneration) ಸಖತ್ ಸದ್ದು ಮಾಡುತ್ತಿದೆ. ಮೂಲಗಳ ಪ್ರಕಾರ ಕಲಾವಿದರಿಗಾಗಿಯೇ ಒಟ್ಟು 250 ಕೋಟಿ ರೂಪಾಯಿಗೂ ಅಧಿಕ ಖರ್ಚು ಮಾಡಿದ್ದಾರಂತೆ ನಿರ್ಮಾಪಕರು. ಅದರಲ್ಲಿ ಅತೀ ಹೆಚ್ಚು ಸಂಭಾವನೆ ಪಡೆದಿರೋದು ಚಿತ್ರ ನಾಯಕ ಪ್ರಭಾಸ್.

ಪ್ರಭಾಸ್‌ (Prabhas) ಈ ಸಿನಿಮಾಗಾಗಿ ಬರೋಬ್ಬರಿ 150 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರಂತೆ.  ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಮತ್ತು ಕಮಲ್‌ ಹಾಸನ್‌ ತಲಾ 20 ಕೋಟಿ ರೂಪಾಯಿ ಸಂಭಾವನೆ ಜೇಬಿಗಿಳಿಸಿಕೊಂಡಿದ್ದಾರೆ. ನಾಯಕಿ ದಿಶಾ ಪಟಾಣಿ 5 ಕೋಟಿ ರೂಪಾಯಿಗೆ ತೃಪ್ತಿ ಪಟ್ಟಿದ್ದಾರೆ. ಲಕ್ಷದಲ್ಲಿ ಸಂಭಾವನೆ ಪಡೆಯುವ ಅನೇಕ ನಟರೂ ಈ ಸಿನಿಮಾದಲ್ಲಿ ಇದ್ದಾರೆ.

ನಾಗ್‌ ಅಶ್ವಿನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಲ್ಕಿ (Kalki 2898 AD) ಸಿನಿಮಾ, ಈಗಾಗಲೇ ಶೂಟಿಂಗ್‌ನಲ್ಲಿ ಬಿಜಿಯಾಗಿದೆ. ಈ ನಡುವೆ ಈಗ ಸೋಷಿಯಲ್‌ ಮೀಡಿಯಾದಲ್ಲಿ ಈ ಸಿನಿಮಾ  ಟ್ರೆಂಡಿಂಗ್‌ನಲ್ಲಿಯೂ ಮುಂದುವರಿದಿದೆ. ಅದಕ್ಕೆ ಕಾರಣ ರಿಲೀಸ್‌ ಆದ ಅಮಿತಾಭ್ ಬಚ್ಚನ್‌ ಅವರ ಹೊಸ ಲುಕ್‌.

 

ಹೌದು, ಕಳೆದ ವರ್ಷಅಮಿತಾಭ್ (Amitabh Bachchan)  ಅವರ ಬರ್ತ್‌ಡೇ ದಿನದಂದು ಕಲ್ಕಿ ಚಿತ್ರದಲ್ಲಿನ ಅವರ ಲುಕ್‌ ಹೇಗಿರಲಿದೆ ಎಂಬ ಸಣ್ಣ ಝಲಕ್‌ ರಿಲೀಸ್‌ ಆಗಿತ್ತು. ಅದಾದ ಬಳಿಕ ಚಿತ್ರದಲ್ಲಿ ಅಮಿತಾಭ್ ಪಾತ್ರ ಹೇಗಿರಲಿದೆ ಎಂಬ ಕುತೂಹಲವೂ ಹೆಚ್ಚಾಗಿತ್ತು. ಇದೀಗ ಆ ಕೌತುಕವನ್ನು ತಣಿದಿದೆ. ಅಂದರೆ, ಕಲ್ಕಿ ಚಿತ್ರದಲ್ಲಿನ ಅಮಿತಾಭ್ ಬಚ್ಚನ್‌ ಪಾತ್ರದ ಝಲಕ್‌ ಹೊರಬಿದ್ದಿದೆ.

Share This Article