ಚಿಕ್ಕೋಡಿಯಲ್ಲಿ ನಾಪತ್ತೆಯಾಗಿದ್ದ ಜೈನಮುನಿ ಹತ್ಯೆ – ಭಕ್ತರ ದೂರಿನ ಬಳಿಕ ಪ್ರಕರಣ ಬೆಳಕಿಗೆ

Public TV
2 Min Read

– ಇಬ್ಬರನ್ನ ವಶಕ್ಕೆ ಪಡೆದು ವಿಚಾರಣೆ

ಚಿಕ್ಕೋಡಿ (ಬೆಳಗಾವಿ): ಹೀರೆಕುಡಿ (Hirekudi) ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿಯನ್ನು (Jain Muni)  ಬರ್ಬರವಾಗಿ ಹತ್ಯೆಗೈದಿದ್ದು, ಭಕ್ತರ ದೂರಿನ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.

ಜಿಲ್ಲೆಯ ಹೀರೆಕುಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನ ಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಬರ್ಬರವಾಗಿ ಹತ್ಯೆಯಾಗಿದ್ದಾರೆ. ಕಳೆದ 15 ವರ್ಷಗಳಿಂದ ನಂದಿ ಪರ್ವತ ಆಶ್ರಮದಲ್ಲಿ ವಾಸವಿದ್ದ ಇವರು ಜುಲೈ 6ರಿಂದ ಆಶ್ರಮದಿಂದ ನಾಪತ್ತೆಯಾಗಿದ್ದರು. ಈ ಕುರಿತು ಜುಲೈ 6ರಂದು ಭಕ್ತರು ಆಶ್ರಮದ ಸುತ್ತಮುತ್ತ ಶೋಧ ನಡೆಸಿದ್ದರು. ಇದನ್ನೂ ಓದಿ: ದೊಡ್ಡಪ್ಪನ ಮಗಳಿಗೆ ಲೈಂಗಿಕ ದೌರ್ಜನ್ಯ: ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ

ಎಲ್ಲಿಯೂ ಪತ್ತೆಯಾಗದ ಹಿನ್ನೆಲೆ ಶುಕ್ರವಾರ ಚಿಕ್ಕೋಡಿ (Chikkodi) ಪೊಲೀಸ್ ಠಾಣೆಗೆ ಜೈನಮುನಿ ನಾಪತ್ತೆಯಾದ ಬಗ್ಗೆ ದೂರು ನೀಡಲಾಗಿತ್ತು. ಆಚಾರ್ಯ ಕಾಮಕುಮಾರನಂದಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭೀಮಪ್ಪ ಉಗಾರೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದರು. ತನಿಖೆ ಸಂದರ್ಭ ಅನುಮಾನದ ಮೇಲೆ ಇಬ್ಬರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ವೇಳೆ ಜೈನಮುನಿ ಹತ್ಯೆಯ ರಹಸ್ಯ ಬಯಲಾಗಿದೆ. ಇದನ್ನೂ ಓದಿ: ಬೀದರ್ ಪೊಲೀಸರ ದಾಳಿ – 50 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಅರೆಸ್ಟ್

ಆರೋಪಿಗಳು ಹತ್ಯೆ ಮಾಡಿರುವ ಬಗ್ಗೆ ಪೊಲೀಸರ ಬಳಿ ಬಾಯ್ಬಿಟ್ಟಿದ್ದು, ಕೊಲೆ ಮಾಡಿದ ಬಳಿಕ ಶವವನ್ನು ಎಲ್ಲಿ ಬಿಸಾಕಿದ್ದಾರೆ ಎನ್ನುವ ಬಗ್ಗೆ ಸರಿಯಾದ ಮಾಹಿತಿ ನೀಡದೆ ಪೊಲೀಸರನ್ನು ಸತಾಯಿಸಿದ್ದಾರೆ. ಒಂದು ಬಾರಿ ಕೊಲೆ ಮಾಡಿ ಮೃತದೇಹವನ್ನು ಕತ್ತರಿಸಿ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ಗದ್ದೆಯ ತೆರೆದ ಕೊಳವೆ ಬಾವಿಯಲ್ಲಿ ಎಸೆದಿದ್ದೇವೆ ಎಂದ ಆರೋಪಿಗಳು ಮತ್ತೊಂದು ಬಾರಿ ಮೃತದೇಹವನ್ನು ಬಟ್ಟೆಯಲ್ಲಿ ಸುತ್ತಿ ನದಿಗೆ ಎಸೆದಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ವಿದೇಶಿ ಮಹಿಳೆಯರಿಂದ ಪಿಎಸ್‍ಐ ಸೇರಿ ನಾಲ್ವರ ಮೇಲೆ ಹಲ್ಲೆ

ಸ್ಪಷ್ಟ ಮಾಹಿತಿ ದೊರೆಯದ ಹಿನ್ನೆಲೆ ನಂದಿ ಮಹಾರಾಜರ ಮೃತದೇಹಕ್ಕಾಗಿ ಪೊಲೀಸರು ರಾತ್ರಿಯಿಡೀ ಶೋಧ ನಡೆಸಿದ್ದಾರೆ. ಖಟಕಬಾವಿ ಗ್ರಾಮ ಸೇರಿದಂತೆ ಹಲವೆಡೆ ಶೋಧ ನಡೆಸಿದ ಪೊಲೀಸರು ಮೃತದೇಹ ಸಿಗದ ಕಾರಣ ಶನಿವಾರ ಬೆಳಗ್ಗೆ 6:30ರಿಂದ ಶೋಧ ಕಾರ್ಯ ನಡೆಸಲು ಮುಂದಾಗಿದ್ದಾರೆ. ಇದನ್ನೂ ಓದಿ: ಗುಂಡು ಹಾರಿಸಿಕೊಂಡು ಕೊಯಮತ್ತೂರು ಡಿಐಜಿ ಆತ್ಮಹತ್ಯೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್