ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಮೈಸೂರಿಗೆ ಬಂದಿದ್ದ ಸಂದರ್ಭದಲ್ಲಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿಯ ಬಿಲ್ ಪಾವತಿಸದ ಅರಣ್ಯ ಇಲಾಖೆ ವಿರುದ್ಧ ಇದೀಗ ಹೋಟೆಲ್ ವ್ಯವಸ್ಥಾಪಕರು ರೊಚ್ಚಿಗೆದ್ದಿದ್ದಾರೆ.
ಜೂನ್ 1ರ ಒಳಗೆ 80 ಲಕ್ಷ ಬಿಲ್ ಕಟ್ಟದಿದ್ದರೆ ಕಾನೂನಾತ್ಮಕ ಕ್ರಮದ ಎಚ್ಚರಿಕೆಯನ್ನು ನೀಡಿದ್ದಾರೆ. ಮೆ.21 ರಂದು ಅರಣ್ಯ ಇಲಾಖೆ ಅಧಿಕಾರಿಗೆ ಹೋಟೆಲ್ ವ್ಯವಸ್ಥಾಪಕರು ಪತ್ರ ಬರೆದಿರುವ ಅವರು, 18% ಬಡ್ಡಿ ಸಮೇತ 80 ಲಕ್ಷ ಪಾವತಿಸಿ ಎಂದು ತಿಳಿಸಿದ್ದಾರೆ. ಅಲ್ಲದೇ ಜೂನ್ 1ರ ಒಳಗೆ ಬಿಲ್ ಕಟ್ಟದಿದ್ದರೆ ಕಾನೂನಾತ್ಮಕ ಕ್ರಮದ ಎಚ್ಚರಿಕೆಯನ್ನೂ ನೀಡಿದ್ದಾರೆ. ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಎಫೆಕ್ಟ್- ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆಯ ಎಚ್ಚರಿಕೆ
ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿಯವರು ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದ 50ನೇ ವರ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಮಿಸಿದ್ದರು. ಈ ವೇಳೆ ಮೈಸೂರಿನ ಪಂಚತಾರ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದರು. ಈ ಕಾರ್ಯಕ್ರಮದ ಒಟ್ಟು ವೆಚ್ಚ 6 ಕೋಟಿ ರೂ. ಆಗಿತ್ತು. ಆದರೆ ಇದುವರೆಗೆ 3 ಕೋಟಿ ರೂಪಾಯಿ ಮಾತ್ರ ಬಿಡುಗಡೆ ಆಗಿದೆ.
ರಾಜ್ಯ ಅರಣ್ಯ ಇಲಾಖೆಗೆ ಕೇಂದ್ರ ಅರಣ್ಯ ಇಲಾಖೆಯಿಂದ ಬಾಕಿ ಹಣ ಬರಬೇಕಿದೆ. ಹಣ ತುರ್ತಾಗಿ ಬಿಡುಗಡೆ ಮಾಡಿ ಎಂದು ರಾಜ್ಯ ಅರಣ್ಯ ಇಲಾಖೆಯಿಂದ ಕೇಂದ್ರ ಅರಣ್ಯ ಇಲಾಖೆಗೆ ಪತ್ರ ರವಾನೆಯಾಗಿದೆ. ಆದರೆ ವರ್ಷ ಕಳೆದರೂ ಹೋಟೆಲ್ ಬಿಲ್ ಪಾವತಿಸಿಲ್ಲ.