ಡಾಕ್ಟರ್ ಇಲ್ಲದ ವೇಳೆ ಇಂಜೆಕ್ಷನ್ ಕೊಟ್ಟ ನರ್ಸ್- ಪುಟ್ಟ ಕಂದಮ್ಮ ದುರ್ಮರಣ

By
1 Min Read

ಮಂಗಳೂರು: ಸರ್ಕಾರಿ ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಒಂದೂವರೆ ತಿಂಗಳ ಮಗು ಸಾವನ್ನಪ್ಪಿದ ಆರೋಪವೊಂದು ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada) ಬೆಳ್ತಂಗಡಿಯಲ್ಲಿ (Belthangady) ಕೇಳಿಬಂದಿದೆ.

ಬೆಳ್ತಂಗಡಿಯ ತಾಲೂಕು ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಧರ್ಮಸ್ಥಳ (Dharmasthala) ಗ್ರಾಮದ ಮುಳಿಕಾರ್ ನಿವಾಸಿ ಬಾಲಕೃಷ್ಣ ಮತ್ತು ಸವಿತಾ ದಂಪತಿಯ ಮಗು ಅಂಶಿಕಾ ಮೃತ ದುರ್ದೈವಿ.

ಕಫ ಅಗಿತ್ತು ಎಂದು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಅಂಶಿಕಾಳನ್ನು ದಾಖಲು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಡಾಕ್ಟರ್ ಇಲ್ಲದ ವೇಳೆ ನರ್ಸ್ ಇಂಜೆಕ್ಷನ್ ನೀಡದ ಬಳಿಕ ಮಗು ಸಾವನ್ನಪ್ಪಿದೆ ಎಂದು ಮನೆಯವರು ಆರೋಪ ಮಾಡುತ್ತಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ಸಿಗರು ವಸೂಲಿ ದಂಧೆಯಲ್ಲಿ 100% ಮುಳುಗಿದ್ದಾರೆ: ವಿಜಯೇಂದ್ರ ಕಿಡಿ

ಘಟನೆಯ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಮಾಜಿ ಶಾಸಕ ವಸಂತ ಬಂಗೇರಾ ಆಸ್ಪತ್ರೆಗೆ ಭೇಟಿ ನೀಡಿದ್ದು, ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಸಂಬಂಧ ಮಗುವಿನ ತಂದೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್