ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳ್ಳರಿಗೆ ಪೊಲೀಸರ ಭಯ ಇದ್ದಂಗೆ ಕಾಣ್ತಿಲ್ಲ. ಸಿಸಿಟಿವಿಯಲ್ಲಿ ಸೆರೆಯಾಗ್ತೀವಿ ಅನ್ನುವ ಭಯ ಕೂಡ ಇಲ್ಲ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಇತ್ತೀಚೆಗೆ ಸರ್ಜಾಪುರದಲ್ಲಿ ಮನೆ ಮುಂದೆ ನಿಲ್ಲಿಸಿದ ಸ್ಕೂಟಿ ಕದ್ದ (Theft) ಮೂವರು ಖದೀಮರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ:ಕರ್ನಾಟಕದಲ್ಲಿ ವಿರೋಧ ಪಕ್ಷಗಳ ಸ್ಟಾರ್ ಚೆನ್ನಾಗಿಲ್ಲ: ಡಿವಿಎಸ್

ಕಳ್ಳತನದ ಎರಡು ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೊಮ್ಮಸಂದ್ರದ ಕಡೆ ತಳ್ಳಿಕೊಂಡು ಹೋಗುವ ದೃಶ್ಯ ಮತ್ತು ಇನ್ನೊಂದು ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡಿದ ದೃಶ್ಯವನ್ನು ಪೊಲೀಸರಿಗೆ ಟ್ಯಾಗ್ ಮಾಡಿ ಎಕ್ಸ್ ಖಾತೆಯಲ್ಲಿ ವಿಡಿಯೋ ಶೇರ್ ಮಾಡಲಾಗಿದೆ. ಈ ಹಿನ್ನೆಲೆ ಕಳ್ಳತನ ಬಗ್ಗೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಖದೀಮರಿಗಾಗಿ ಹುಡುಕಾಟ ಮುಂದುವರೆದಿದೆ.

 
			 
                                
                              
		