Chandrayaan-3 ಬಾಹ್ಯಾಕಾಶ ನೌಕೆಯು ಸುರಕ್ಷಿತವಾಗಿದೆ: ಇಸ್ರೋ

By
1 Min Read

ನವದೆಹಲಿ: ಭೂಮಿಯಿಂದ ಚಂದ್ರನತ್ತ ಹಾರಿರುವ ಚಂದ್ರಯಾನ-3 (Chandrayaan-3) ಬಾಹ್ಯಾಕಾಶ ನೌಕೆಯು ಉತ್ತಮವಾಗಿದೆ ಎಂದು ಇಸ್ರೋ (ISRO) ಹೇಳಿದೆ.

ಈ ಸಂಬಂಧ ಶನಿವಾರ ಟ್ವೀಟ್ ಮಾಡಿರುವ ಇಸ್ರೋ, ಶುಕ್ರವಾರ ಚಂದ್ರನೆಡೆ ತೆರಳಿರುವ ಬಾಹ್ಯಾಕಾಶ ನೌಕೆಯು ಸುರಕ್ಷಿತವಾಗಿದೆ. ಬೆಂಗಳೂರಿನಲ್ಲಿರುವ ಇಸ್ರೋದ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‍ವರ್ಕ್ (ISTRAC)ನಲ್ಲಿ ಚಂದ್ರಯಾನ-3 ಗಗನನೌಕೆಯು ಯಶಸ್ವಿಯಾಗಿ ಕಾರ್ಯನಿರ್ವಹಿಸಿದೆ. ಬಾಹ್ಯಾಕಾಶ ನೌಕೆಯು ಈಗ 41,762 ಕಿ.ಮೀ x 173 ಕಿ.ಮೀ ಕಕ್ಷೆಯಲ್ಲಿದೆ ಎಂದು ಮಾಹಿತಿ ನೀಡಿದೆ.

ಶುಕ್ರವಾರ ಆಂಧ್ರಪ್ರದೇಶದ (Andhrapradesh) ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಶುಭಶುಕ್ರವಾರದಂದು ಜಿಎಸ್‍ಎಲ್‍ವಿ ಮಾರ್ಕ್ 3 ಹೆವಿ ಲಿಫ್ಟ್ ಉಡಾವಣಾ ವಾಹನದಿಂದ ಉಪಗ್ರಹವು ಮಧ್ಯಾಹ್ನ 2.35ಕ್ಕೆ ನಭಕ್ಕೆ ಚಿಮ್ಮಿತ್ತು. ಇದನ್ನೂ ಓದಿ: ಅಮೆರಿಕದ 1 ನಿರ್ಧಾರ – ಬಾಹ್ಯಾಕಾಶ ಕ್ಷೇತ್ರದಲ್ಲಿ ಸ್ವಾವಲಂಬಿಯಾದ ಭಾರತ

ಗಗನನೌಕೆಯು ಭೂಮಿಯಿಂದ ಚಂದ್ರನೆಡೆಗೆ ತಲುಪಲು ಸುಮಾರು 40 ದಿನ ತೆಗೆದುಕೊಳ್ಳುತ್ತದೆ. ಆಗಸ್ಟ್ 23 ರಂದು ಚಂದ್ರನಲ್ಲಿ ಇಳಿಯಲಿದೆ ಎಂದು ನಿರೀಕ್ಷಿಸಲಾಗಿದೆ. ಲ್ಯಾಂಡಿಂಗ್ ನಂತರ ಇದು ಒಂದು ಚಂದ್ರನ ದಿನಕ್ಕೆ ಕಾರ್ಯನಿರ್ವಹಿಸುತ್ತದೆ. ಅಂದರೆ ಸರಿಸುಮಾರು 14 ಭೂಮಿಯ ದಿನಗಳು. ಚಂದ್ರನ ಮೇಲಿನ ಒಂದು ದಿನವು ಭೂಮಿಯ ಮೇಲಿನ 14 ದಿನಗಳಿಗೆ ಸಮಾನವಾಗಿರುತ್ತದೆ. ಇದನ್ನೂ ಓದಿ: ಚಂದ್ರಯಾನ-3 ಉಡಾವಣೆ – ನಿಮಗೆ ತಿಳಿದಿರಲೇ ಬೇಕಾದ 10 ಅಂಶಗಳು

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್