ಅಕ್ರಮ ಆಸ್ತಿಗಳಿಕೆ ಪ್ರಕರಣ – ಜಮೀರ್ ಅಹ್ಮದ್ ವಿಚಾರಣೆ ಮುಂದೂಡಿಕೆ

Public TV
1 Min Read

ನವದೆಹಲಿ: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ವಿರುದ್ಧ ನಡೆಯುತ್ತಿರುವ ತನಿಖೆ ತಡೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಅಕ್ಟೋಬರ್‌ನಲ್ಲಿ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ (Supreme Court) ಹೇಳಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸಂಜೀವ್ ಖನ್ನಾ ಅವರಿದ್ದ ಪೀಠ ವಿಚಾರಣೆ ಮುಂದೂಡಿಕೆ ಮಾಡಿದೆ.

ಈ ಹಿಂದೆ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಲೋಕಾಯುಕ್ತ ತನಿಖೆಗೆ ಮಧ್ಯಂತರ ತಡೆ ನೀಡಿತ್ತು. ಇದಕ್ಕೂ ಮುನ್ನ ಲೋಕಾಯುಕ್ತ ನಡೆಸುತ್ತಿದ್ದ ತನಿಖೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿತ್ತು. ಈ ಹಿನ್ನಲೆ ಜಮೀರ್ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ತಮಿಳುನಾಡಿನ ಒತ್ತಡಕ್ಕೆ ಮೇಕೆದಾಟು ಅಸ್ತ್ರ ಹೂಡಿದ ಕರ್ನಾಟಕ

ಜಮೀರ್ ಅಹ್ಮದ್ ಖಾನ್ 87.5 ಕೋಟಿ ಮೌಲ್ಯದ ಆಸ್ತಿಯನ್ನು ಸಂಗ್ರಹಿಸಿದ್ದಾರೆ. ಅವರ ಆದಾಯ ಮೂಲಕ್ಕಿಂತ 2000%ಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಲೋಕಾಯುಕ್ತ (Lokayukta) ಎಫ್‍ಐಆರ್ ದಾಖಲಿಸಿದೆ. ಇದಕ್ಕೂ ಮುನ್ನ ಪ್ರಕರಣದ ವಿಚಾರಣೆಯನ್ನು ಎಸಿಬಿ ನಡೆಸುತ್ತಿತ್ತು. ಎಸಿಬಿ ಬಂದ್ ಆದ ಹಿನ್ನಲೆ ಲೋಕಾಯುಕ್ತಕ್ಕೆ ಪ್ರಕರಣ ವರ್ಗಾಯಿಸಲಾಗಿದೆ. ಇದನ್ನೂ ಓದಿ: ವಿಪಕ್ಷಗಳ ಮೈತ್ರಿಯಲ್ಲಿರುವ INDIA ಹೆಸರನ್ನು ನಿರ್ಬಂಧಿಸಿ – ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್