ಅತ್ಯಂತ ಕರಾಳ ದಿನ, ಡಿಸಿಎಂ ಅಪರಾಧಿ ಅನ್ನೋದು ರಾಜ್ಯಕ್ಕೆ ಗೊತ್ತಿದೆ: ಭಾಸ್ಕರ್‌ ರಾವ್‌ ಆಕ್ರೋಶ

Public TV
1 Min Read

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ (Chinnaswamy Stadium Stampede Case) ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ ದಯಾನಂದ್‌ (B Dayananda) ಅವರನ್ನು ಅಮಾನತು ಮಾಡಿದ್ದಕ್ಕೆ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ (Bhaskar Rao) ಕಿಡಿಕಾರಿದ್ದಾರೆ.

ಎಕ್ಸ್‌ನಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಅಮಾನತು ಕರ್ನಾಟಕ ಪೊಲೀಸ್ (Karnataka Police) ಇತಿಹಾಸದಲ್ಲಿ ಅತ್ಯಂತ ಕರಾಳ ದಿನ ಎಂದು ಪೋಸ್ಟ್‌ ಮಾಡಿದ್ದಾರೆ.


ಪೋಸ್ಟ್‌ನಲ್ಲಿ ಏನಿದೆ?
ಸಿದ್ದರಾಮಯ್ಯ (Siddaramaiah) ಅವರು ಭಯಗೊಂಡಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಅಮಾನತು ಮಾಡಿರುವುದು ಕರ್ನಾಟಕ ಪೊಲೀಸ್ ಇತಿಹಾಸದಲ್ಲಿ ಅತ್ಯಂತ ಕರಾಳ ದಿನ. ಸತ್ಯ ಹೇಳಿದ್ದಕ್ಕೆ ಅವರಿಗೆ ಶಿಕ್ಷೆಯ ರೂಪದಲ್ಲಿ ಬಹುಮಾನ ನೀಡಿದ್ದಾರೆ. ಇದನ್ನೂ ಓದಿ: Stampede Case | ಸಿಎಂ ಸೂಚನೆ ಬೆನ್ನಲ್ಲೇ ನಾಲ್ವರು ಅರೆಸ್ಟ್‌, ಉಳಿದವರು ಎಸ್ಕೇಪ್‌

ದಯಾನಂದ್‌ ಮತ್ತು ಅವರ ತಂಡ ಬೆಂಗಳೂರನ್ನು ಸುರಕ್ಷಿತವಾಗಿಡಲು ಇಡೀ ರಾತ್ರಿ ಶ್ರಮಿಸಿತ್ತು. ಸಾವಿನ ಪರೇಡ್‌ ನಡೆಸಲು ಕಾರಣರಾದ ಉಪಮುಖ್ಯಮಂತ್ರಿಯೇ ಈ ಪ್ರಕರಣದಲ್ಲಿ ಪ್ರಮುಖ ಅಪರಾಧಿ ಎಂದು ಕರ್ನಾಟಕದ ಎಲ್ಲರಿಗೂ ತಿಳಿದಿದೆ.

ಯಾವುದೇ ಮುಖ್ಯಮಂತ್ರಿ ಇಷ್ಟು ಅಸಹಾಯಕ, ಹೇಡಿಯಾಗಲು ಸಾಧ್ಯವಿಲ್ಲ. ಸರ್ಕಾರದ ಕೈಗೆ ರಕ್ತ ಅಂಟಿಕೊಂಡಿದ್ದು ಈಗ ನಿಯಂತ್ರಣವನ್ನು ಕಳೆದುಕೊಂಡಿದ್ದು ಅಪಾಯದಲ್ಲಿದೆ.

Share This Article