ದಕ್ಷಿಣ ಕೊಡಗಿನಲ್ಲಿ ನಿಲ್ಲದ ಹುಲಿ ಹಾವಳಿ – ಅರಣ್ಯ ಇಲಾಖೆಯ ವಿರುದ್ಧ ಸಿಡಿದ ರೈತರು

Public TV
1 Min Read

ಮಡಿಕೇರಿ: ದಕ್ಷಿಣ ಕೊಡಗಿನಲ್ಲಿ ಜಾನುವಾರುಗಳ ಮೇಲೆ ನಿರಂತರವಾಗಿ ಹುಲಿ ದಾಳಿ ನಡೆಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅರಣ್ಯ ಇಲಾಖೆಯ ವಿರುದ್ಧ ರೈತರು ಸಿಡಿದೆದ್ದಿದ್ದಾರೆ.

ಇತ್ತೀಚಿಗಷ್ಟೆ ಜಿಲ್ಲೆಯ ಪೋನ್ನಂಪೇಟೆ ತಾಲೂಕಿನ ಕುಂದ ಹಾಗೂ ಈಚೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದ ಗ್ರಾಮದಲ್ಲಿ ರೈತರಿಗೆ ಸೇರಿದ ಹಸುಗಳ ಮೇಲೆ ಹುಲಿ ದಾಳಿ ನಡೆಸಿ, ಜಾನುವಾರುಗಳನ್ನು ಕೊಂದು ಹಾಕುತ್ತಿದೆ. ಗ್ರಾಮದ ಮನೆಯ ಸಮೀಪದ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುಗಳು ಹುಲಿ ದಾಳಿಗೆ ಬಲಿಯಾಗುತ್ತಿವೆ. ಇದನ್ನೂ ಓದಿ: ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾಗೆ ಕೊರೊನಾ

ಈ ವಿಷಯ ತಿಳಿದು ಗಾಮಸ್ಥರು ಭಯಭೀತರಾಗಿದ್ದಾರೆ. ಅಲ್ಲದೆ ಇದೀಗ ಕಾಫಿ ತೋಟದಲ್ಲಿ ಕಾಫಿ ಗಿಡಗಳಿಗೆ ಕೃತಕ ನೀರು ಹಾಯಿಸುವ ಸಮಯ ಇದಾಗಿದೆ. ಹುಲಿ ಕಾಣಿಸಿಕೊಂಡ ಬಳಿಕ ತೋಟಗಳಲ್ಲಿ ಹುಲಿ ಅಡಗಿಕೊಂಡಿರಬಹುದೇನೋ ಎಂಬ ಭಯದಿಂದ ತೋಟಕ್ಕೆ ತೆರಳಲು ಕಾರ್ಮಿಕರು ಭಯಪಡುತ್ತಿದ್ದಾರೆ. ಇದನ್ನೂ ಓದಿ: ತಾಜ್ ವೆಸ್ಟೆಂಡ್ ಹೋಟೆಲ್‍ನಲ್ಲಿ ನಾನು ರಾಸಲೀಲೆ ಮಾಡಲು ಹೋಗ್ತಿರಲಿಲ್ಲ: ಹೆಚ್‍ಡಿಕೆ ಕಿಡಿ

ಹುಲಿ ದಾಳಿಗೆ ತುತ್ತಾಗಿ ಬಲಿಯಾಗಿರುವ ಹಸುವಿನ ಮಾಲೀಕರಿಗೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ಇಂದು ರಾಜ್ಯ ರೈತ ಸಂಘಟನೆಯಿಂದ ಪೋನ್ನಂಪೇಟೆ ಅರಣ್ಯ ಇಲಾಖೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನುಸೋಮಯ್ಯ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು

ದಕ್ಷಿಣ ಕೊಡಗಿನಲ್ಲಿ ಹುಲಿ ಹಾವಳಿ ನಿಯಂತ್ರಿಸುವ ಸಲುವಾಗಿ ಹೋರಾಟ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಆದಿಕಾರಿಗಳು ಸ್ಥಳಕ್ಕೆ ಬರಬೇಕು ಎಂದು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಸ್ಥಳಕ್ಕೆ ಡಿಎಫ್‍ಒ ಚಕ್ರಪಾಣಿ ಡಿವೈಎಸ್‍ಪಿ ಜಯಕುಮಾರ್ ಆಗಮಿಸಿ ಇನ್ನೂ ಏಳು ದಿನಗಳಲ್ಲಿ ಹುಲಿ ಸೆರೆಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *