ಸಿನಿಮಾ ಶೀರ್ಷಿಕೆ ಆಯಿತು ಬೆಂಗಳೂರಿನ ಪ್ರಸಿದ್ಧ ಬಡಾವಣೆ

Public TV
1 Min Read

ಹುಶಃ ‘ಎಲೆಕ್ಟ್ರಾನಿಕ್ ಸಿಟಿ’ (Electronic City) ಎಂಬ ಹೆಸರನ್ನು ಕೇಳದವರು ಯಾರು ಇಲ್ಲ ಎನ್ನಬಹುದು. ಅದರಲ್ಲೂ ಐಟಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸುವರಿಗಂತೂ ಈ ಹೆಸರು ಚಿರಪರಿಚಿತ.   ಬೆಂಗಳೂರಿನ ಈ ಸುಪ್ರಸಿದ್ಧ ಬಡಾವಣೆಯಲ್ಲಿ ಸಾಕಷ್ಟು ಐಟಿ ಕಂಪನಿಗಳಿವೆ. ಈಗ ಇದೇ ಹೆಸರಿನಲ್ಲಿ ಚಿತ್ರವೊಂದು ನಿರ್ಮಾಣವಾಗಿದೆ.

ಮೂಲತಃ ಐಟಿ ಉದ್ಯೋಗಿಯಾಗಿರುವ ಆರ್ ಚಿಕ್ಕಣ್ಣ (R. Chikkanna) ಈ ಚಿತ್ರವನ್ನು ನಿರ್ಮಾಣ ಮಾಡಿ ನಿರ್ದೇಶಿಸಿದ್ದಾರೆ. ಈವರೆಗೂ ಕೆಲವು ಕಿರುಚಿತ್ರಗಳನ್ನು ಚಿಕ್ಕಣ್ಣ ನಿರ್ದೇಶಿಸಿದ್ದಾರೆ. ಈಗಿನ ಬಹುಪಾಲು ಯುವಕರು ಐಟಿ ಉದ್ಯೋಗಿಗಳಾಗಿದ್ದು, ಸದಾ ಕೆಲಸದ ಒತ್ತಡದಲ್ಲಿರುತ್ತಾರೆ. ಅಂತಹ ಐಟಿ ಕಂಪನಿಯ ಉದ್ಯೋಗಿಯ ವರ್ಕ್ ಲೈಫ್  ಹೇಗಿರುತ್ತದೆ? ಎಂಬ ಪ್ರಮುಖ  ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ತ್ರಿಕೋನ ಪ್ರೇಮ ಕಥೆ ಸಹ ಇದೆ.

ಎಲೆಕ್ಟ್ರಾನಿಕ್ ಸಿಟಿ ಸಿನಿಮಾ ಈಗಾಗಲೇ ಅನೇಕ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗಿದೆ.  ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದೆ.  ಆರ್ಯನ್ ಹರ್ಷ (Aryan Harsha) ಈ ಚಿತ್ರದ ನಾಯಕನಾಗಿದ್ದು,  ದಿಯಾ ಆಶ್ಲೇಶ, ರಕ್ಷಿತ ಕೆರೆಮನೆ ನಾಯಕಿಯರಾಗಿ ನಟಿಸಿದ್ದಾರೆ. ರಶ್ಮಿ ಶೆಟ್ಟಿ, ಭವ್ಯ ರುತ್ವಿಕ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಚಂದ್ರಶೇಖರ್ ಶ್ರೀವಾಸ್ತವ್ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ವಿನು ಮನಸು ಸಂಗೀತ ನೀಡಿದ್ದಾರೆ. ರಾಜ ಶಿವಶಂಕರ್ ಛಾಯಾಗ್ರಹಣ, ಸೌಂದರ್ ರಾಜ್ ಸಂಕಲನ ಹಾಗೂ ಹಂಪಿ ಸುಂದರ್ ಅವರ ಕಲಾ ನಿರ್ದೇಶನ ಎಲೆಕ್ಟ್ರಾನಿಕ್ ಸಿಟಿ ಚಿತ್ರಕ್ಕಿದೆ.

Share This Article