ವಾಲ್ಮೀಕಿ ಸಮಾಜಕ್ಕೆ ಶೇ. 7.5 ರಷ್ಟು ಮೀಸಲಾತಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Public TV
1 Min Read

ಬೆಂಗಳೂರು: ವಾಲ್ಮೀಕಿ ಸಮಾಜಕ್ಕೆ ಶೇ.7.5 ರಷ್ಟು ಮೀಸಲಾತಿಗೆ ಆಗ್ರಹಿಸಿ ವಾಲ್ಮೀಕಿ ಸಮುದಾಯದಿಂದ ಬೃಹತ್ ಪ್ರತಿಭಟನೆ ನಡೆದಿದೆ.

ನಗರದ ಫ್ರೀಡಂಪಾರ್ಕ್ ಬಳಿ ವಾಲ್ಮೀಕಿ ಸಮುದಾಯದರಿಂದ ಧರಣಿ ಸತ್ಯಾಗ್ರಹ ನಡೆದಿದ್ದು, ಧರಣಿ ಸತ್ಯಾಗ್ರಹದಲ್ಲಿ ನೂರಾರು ಜನ ಭಾಗಿಯಾಗುವ ಸಾಧ್ಯತೆ ಇದೆ. ವಾಲ್ಮೀಕಿ ಸಮುದಾಯದ ಬೇಡಿಕೆಯಂತೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರು ಮೀಸಲಾತಿ ಕಲ್ಪಿಸುವುದಾಗಿ ಭರವಸೆ ನೀಡಿದ್ದರು. ಮೀಸಲಾತಿ ಕಲ್ಪಿಸುವ ವಿಚಾರವಾಗಿ ನಾಗಮೋಹನ್ ದಾಸ್ ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದರು. ಆದರೆ ಸರ್ಕಾರ ಮಾತ್ರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸಮುದಾಯದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನೆಟ್ಟಿಗರಿಂದ ಟ್ರೋಲ್ ಆಯ್ತು ಎಸ್‍ಆರ್‌ಹೆಚ್ ಹೊಸ ಜೆರ್ಸಿ

ಸರ್ಕಾರದದಿಂದ ಸ್ಪಷ್ಟ ನಿರ್ಧಾರ ಪ್ರಕಟವಾಗುವ ತನಕ ಹೋರಾಟ ಕೈಬಿಡದಿರಲು ನಿರ್ಣಯಿಸಿದ್ದಾರೆ. ವಾಲ್ಮೀಕಿ ಸಮುದಾಯಕ್ಕೆ ಶೇ.7.5 ಮೀಸಲಾತಿಗೆ ಸ್ವಾಮೀಜಿಗಳ ಧರಣಿ ವಿಚಾರವಾಗಿ ಧರಣಿ ಸತ್ಯಾಗ್ರಹ ವಾಪಾಸ್ ಪಡೆಯುವಂತೆ ಸಚಿವ ಶ್ರೀರಾಮುಲು ಅವರು, ಸಮುದಾಯದ ಸ್ವಾಮೀಜಿಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಶ್ರೀರಾಮುಲು ಅವರ ಮನವಿಯನ್ನು ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ತಿರಸ್ಕರಿಸಿದ್ದಾರೆ. ಸ್ವಾಮೀಜಿ ಫ್ರೀಡಂ ಪಾರ್ಕ್‍ನಲ್ಲಿ ಕೆಲ ಸಮುದಾಯದ ಮುಖಂಡರ ಜೊತೆ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ. ಇದನ್ನೂ ಓದಿ: ಗುಪ್ತಚರ ವಿಭಾಗ ನನ್ನ ಫೋನ್ ಕದ್ದಾಲಿಕೆ ಮಾಡಿದೆ: ಅಣ್ಣಾಮಲೈ ಆರೋಪ

ಈ ಕುರಿತು ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಸಮುದಾಯದ ವಿಚಾರ ಬಂದರೆ ನಾನು ಯಾವ ತ್ಯಾಗಕ್ಕೂ ಸಿದ್ಧನಾಗಿದ್ದೇನೆ. ಮೀಸಲಾತಿಗೆ ಸಂಬಂಧಿಸಿದಂತೆ ವರದಿ ಕೊಟ್ಟು 1 ವರ್ಷ 8 ತಿಂಗಳಾಗಿದೆ. ಇಷ್ಟು ದಿನ ಸರ್ಕಾರ ಏನು ಮಾಡಿತು. ಧರಣಿ ಸತ್ಯಾಗ್ರಹವನ್ನು ಸದ್ಯಕ್ಕೆ ವಾಪಸ್ ಪಡೆಯಲ್ಲ. ಈ ಹಿಂದೆ ಬಿಎಸ್ ಯಡಿಯೂರಪ್ಪನವರು ಭರವಸೆ ಕೊಟ್ಟಿದ್ದರು. ಆದರೆ ಇಲ್ಲಿವರೆಗೂ ಭರವಸೆ ಈಡೇರಿಲ್ಲ. ಸಮುದಾಯದ ಶಾಸಕರು, ಸಂಸದರ ಇಚ್ಛಾಶಕ್ತಿಯ ಕೊರತೆಯಿಂದ ಇನ್ನೂ ನಮ್ಮ ಬೇಡಿಕೆ ಈಡೇರಿಲ್ಲ. ನಾವು ಜನಪ್ರತಿನಿಧಿಗಳಲ್ಲ, ಸ್ವಾಮೀಜಿಗಳು ನಮ್ಮ ಮೇಲೆ ಜನರಿಗೆ ನಂಬಿಕೆಯಿದೆ. ಸಮಾಜಕ್ಕೆ ಕರೆ ಕೊಟ್ಟು ಧರಣಿ ಸತ್ಯಾಗ್ರಹಕ್ಕೆ ಬಂದಿದ್ದೇನೆ. ಯಾವುದೇ ಕಾರಣಕ್ಕೂ ಧರಣಿ ಸತ್ಯಾಗ್ರಹ ವಾಪಸ್ ಪಡೆಯಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *