ಸಿಸಿ ಕ್ಯಾಮೆರಾಗೆ ಬಟ್ಟೆ ಮುಚ್ಚಿ ಹುಂಡಿ ಕಳ್ಳತನ- ಅರ್ಚಕರಿಂದಲೇ ಕೃತ್ಯ ಆರೋಪ

Public TV
1 Min Read

ರಾಮನಗರ: ದೇವಾಲಯದ (Temple) ಸಿಸಿ ಕ್ಯಾಮೆರಾಗೆ ಬಟ್ಟೆ ಮುಚ್ಚಿ ಹುಂಡಿಯಲ್ಲಿದ್ದ ಹಣ ಕಳ್ಳತನ (Theft) ಮಾಡಿರುವ ಘಟನೆ ಚನ್ನಪಟ್ಟಣ (Channapatna) ತಾಲೂಕಿನ ನೀಲಸಂದ್ರ ಗ್ರಾಮದ ಭೈರವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ.

ಮೊನ್ನೆಯಷ್ಟೇ ಶ್ರೀಭೈರವೇಶ್ವರ ಸ್ವಾಮಿ ದೇವರ ಜಾತ್ರೆ ಅದ್ದೂರಿಯಾಗಿ ನೆರವೇರಿತ್ತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದ ಹಿನ್ನೆಲೆ ದೇವಾಲಯದ ಹುಂಡಿಯಲ್ಲಿ ಹೆಚ್ಚು ಹಣ ಸಂಗ್ರಹವಾಗಿತ್ತು ಎನ್ನಲಾಗಿದೆ. ಇದನ್ನು ಗಮನಿಸಿದ್ದ ದೇವಾಲಯದ ಅರ್ಚಕರು (Priest) ಮಂಗಳವಾರ ರಾತ್ರಿ ಸಿಸಿಟಿವಿಗೆ (CCTV) ಬಟ್ಟೆ ಮುಚ್ಚಿ ಹುಂಡಿಯಿಂದ ಸುಮಾರು 2 ಲಕ್ಷಕ್ಕೂ ಹೆಚ್ಚು ಹಣ ದೋಚಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಲ್ಲಿ ತಲೆ ಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ಸೇರಿ ಐವರ ಬಂಧನ

ದೇವಾಲಯದ ಒಳಗಡೆ ಅರ್ಚಕರು ಓಡಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಅರ್ಚಕರ ವಿರುದ್ಧ ಚನ್ನಪಟ್ಟಣ ಗ್ರಾಮಾಂತರ ಠಾಣೆಗೆ ಗ್ರಾಮಸ್ಥರು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಮುಸ್ಲಿಮರನ್ನ ಟಾರ್ಗೆಟ್‌ ಮಾಡಿ ಹಿಂಸಾಚಾರ – ಇಸ್ಲಾಮಿಕ್‌ ರಾಷ್ಟ್ರಗಳ ಆರೋಪಕ್ಕೆ ಭಾರತ ಕಿಡಿ

Share This Article