20 ಟನ್ ಪಡಿತರ ಅಕ್ಕಿ ತುಂಬಿದ್ದ ಲಾರಿ ಕಳ್ಳತನ – ಅಧಿಕಾರಿಗಳು ಕಂಗಾಲು

Public TV
1 Min Read

ಯಾದಗಿರಿ: ಬರೋಬ್ಬರಿ 20 ಟನ್ ಪಡಿತರ ಅಕ್ಕಿಯನ್ನು (Ration Rice) ತುಂಬಿದ್ದ ಲಾರಿಯನ್ನೇ (Lorry) ಖದೀಮರು ಎಗರಿಸಿರುವ ಘಟನೆ ಯಾದಗಿರಿ (Yadagiri) ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ವಿವಿಧ ಗ್ರಾಮಗಳ ಪಡಿತರ ಕೇಂದ್ರಗಳಿಗೆ ವಿತರಿಸಲೆಂದು ಲಾರಿಯಲ್ಲಿ ಅನ್ನಭಾಗ್ಯದ ಅಕ್ಕಿಯನ್ನು ತುಂಬಿಕೊಂಡು ಹೋಗಲಾಗುತ್ತಿತ್ತು. ನಗರದ ಎಪಿಎಂಸಿ ಬಳಿ ನಿಲ್ಲಿಸಿದ್ದ ಲಾರಿಯನ್ನು ಅಕ್ಕಿ ಸಮೇತ ಕಳವು ಮಾಡಲಾಗಿದೆ.

ಎಪಿಎಂಸಿಯಲ್ಲಿ ಅನ್ನಭಾಗ್ಯ ಅಕ್ಕಿ ಸರಬರಾಜು ಮಾಡುವ 4 ಲಾರಿಗಳನ್ನು ನಿಲ್ಲಿಸಲಾಗಿತ್ತು. ಅದರಲ್ಲಿ 1 ಲಾರಿಯಲ್ಲಿ 420 ಮೂಟೆಯ 20 ಟನ್ ಅಕ್ಕಿ ಇತ್ತು. ಚಾಲಕ ಕೀಯನ್ನು ಲಾರಿಯಲ್ಲೇ ಬಿಟ್ಟು ನಿರ್ಲಕ್ಷ್ಯವಹಿಸಿದ್ದ. ಆತ ರಾತ್ರಿ ಲಾರಿಯಲ್ಲಿ ಮಲಗುವುದನ್ನು ಬಿಟ್ಟು ತನ್ನ ಸ್ವಗ್ರಾಮ ಸುರಪುರಕ್ಕೆ ಹೋಗಿದ್ದ. ಇದನ್ನೂ ಓದಿ: ರಾಜ್ಯದಲ್ಲಿ ವರುಣಾರ್ಭಟ – ರಾಜಧಾನಿಗೆ 2 ದಿನ ಯೆಲ್ಲೋ ಅಲರ್ಟ್

ಚಾಲಕ ಊರಿನಿಂದ ಬೆಳಗ್ಗೆ ವಾಪಸ್ ಬಂದು ನೋಡಿದರೆ ನಿಲ್ಲಿಸಿದ್ದ ಜಾಗದಲ್ಲಿ ಲಾರಿಯೇ ಇರಲಿಲ್ಲ. ಎಪಿಎಂಸಿ ಸೇರಿ ಇಡೀ ಪಟ್ಟಣದಲ್ಲಿ ಲಾರಿಯನ್ನು ಹುಡುಕಿದರೂ ಎಲ್ಲಿಯೂ ಅದರ ಸುಳಿವೇ ಸಿಕ್ಕಿಲ್ಲ.

ಅಕ್ಕಿ ತುಂಬಿದ್ದ ಲಾರಿ ಎಲ್ಲಿಯೂ ಸಿಗದ ಹಿನ್ನೆಲೆಯಲ್ಲಿ ಘಟನೆ ಕುರಿತಂತೆ ಶಹಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಸಿಪಿಐ ಚೆನ್ನಯ್ಯ ಹಿರೇಮಠ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚನೆ ಮಾಡಿ ಲಾರಿಯನ್ನು ಹುಡಕಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಆರೋಪಿಗಳ ಪತ್ತೆಗೆ ಪೋಲಿಸ್ ತನಿಖೆಯೂ ಚುರುಕುಗೊಂಡಿದೆ. ನಗರದ ಎಲ್ಲ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ಮಾಡಲಾಗುತ್ತಿದೆ. ಇದನ್ನೂ ಓದಿ: ಬೆಂಗಳೂರು ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ

Share This Article