ಉಕ್ರೇನ್‌ನಿಂದ ಭಾರತಕ್ಕೆ ಮರಳಿದ ನೂರಾರು ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹ ಆರಂಭ

Public TV
1 Min Read

– ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶ ಕಲ್ಪಿಸುವಂತೆ ಪ್ರಧಾನಿಗೆ ಮನವಿ

ನವದೆಹಲಿ: ಯುದ್ಧ ಪೀಡಿತ ಉಕ್ರೇನ್‌ನಿಂದ ವಾಪಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳು ಭಾರತೀಯ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶಕ್ಕೆ ಆಗ್ರಹಿಸಿ 5 ದಿನಗಳ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಉಕ್ರೇನ್‌ನಿಂದ ವಾಪಸ್ಸಾದ ವಿದ್ಯಾರ್ಥಿಗಳು ತಮ್ಮ ಭವಿಷ್ಯ ಕಳೆದುಕೊಳ್ಳುವ ಆತಂಕದಲ್ಲಿದ್ದು, ಖಿನ್ನತೆ, ಆತಂಕ ಇತರ ಮಾನಸಿಕ ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಹಾಗಾಗಿ ತಮ್ಮ ಭವಿಷ್ಯ ಉಳಿಸಬೇಕು. ಅದಕ್ಕಾಗಿ ಸರ್ಕಾರ ನಮಗೆ ಸಹಾಯ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ವಿಚ್ಛೇದನ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿದ್ದಕ್ಕೆ ಪತ್ನಿಯನ್ನೇ ಗುಂಡಿಕ್ಕಿ ಕೊಂದ ಪತಿ

ದೆಹಲಿಯ ರಾಮಲೀಲಾ ಮೈದಾನದಲ್ಲಿ ಜುಲೈ 23 ರಿಂದ 27ರ ವರೆಗೆ ಉಪವಾಸ ಸತ್ಯಾಗ್ರಹ ನಡೆಯಲಿದೆ. ಕಳೆದ ತಿಂಗಳು, ದೇಶದ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶಕ್ಕಾಗಿ ಹಲವಾರು ವಿದ್ಯಾರ್ಥಿಗಳು ರಾಜಧಾನಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ್ದರು.

ನಾವು ಜಂತರ್ ಮಂತರ್‌ನಲ್ಲಿ ಮೂರು ಬಾರಿ, ದ್ವಾರಕದಲ್ಲಿನ ರಾಷ್ಟ್ರೀಯ ವೈದ್ಯಕೀಯ ಆಯೋಗದ (MNC) ಕಚೇರಿಯಲ್ಲಿ, ಪ್ರಧಾನಮಂತ್ರಿ ಕಚೇರಿ, ಆರೋಗ್ಯ ಸಚಿವಾಲಯ, ಶಿಕ್ಷಣ ಸಚಿವಾಲಯ ಕಚೇರಿಗಳ ಮುಂದೆ ಪ್ರತಿಭಟನೆ ಮಾಡಿದ್ದೇವೆ. ಭಾರತದ ರಾಷ್ಟçಪತಿಗಳಿಗೆ ನಮ್ಮ ಬೇಡಿಕೆ-ಕೋರಿಕೆ ಪತ್ರವನ್ನು ಸಲ್ಲಿಸಿದ್ದೇವೆ. ಆದರೆ ಇಲ್ಲಿಯವರೆಗೆ ಯಾವುದೇ ಭರವಸೆ ಇಲ್ಲ. ಅನಿವಾರ್ಯ ಕಾರಣಗಳಿಂದಾಗಿ ಇಂದು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ ಎಂದು ಹೇಳಿದ್ದರೆ. ಇದನ್ನೂ ಓದಿ: ಇಂಡಿಗೋ ಏರ್‌ಲೈನ್ಸ್‌ನ ಗಗನಸಖಿಯೊಂದಿಗೆ ಅಸಭ್ಯ ವರ್ತನೆ- ಪ್ರಯಾಣಿಕನ ಬಂಧನ

ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಸರಿಸುಮಾರು 12,000 ಅಂತಹ ವಿದ್ಯಾರ್ಥಿಗಳಿರುವುದರಿಂದ 600 ವೈದ್ಯಕೀಯ ಕಾಲೇಜುಗಳಲ್ಲಿ ಪ್ರತಿ ಸಂಸ್ಥೆಯು ಸುಮಾರು 20 ವಿದ್ಯಾರ್ಥಿಗಳನ್ನು ವ್ಯವಸ್ಥೆಗೊಳಿಸಬಹುದು ಎಂದು ಅವರು ಕೇಳಿಕೊಂಡಿದ್ದಾರೆ.

ರಷ್ಯಾದ ಪಡೆಗಳು ಉಕ್ರೇನ್ ವಿರುದ್ಧ ಆಕ್ರಮಣವನ್ನು ಪ್ರಾರಂಭಿಸಿದ ನಂತರ ಉಕ್ರೇನ್‌ನಾದ್ಯಂತ ವಿವಿಧ ವೈದ್ಯಕೀಯ ಕಾಲೇಜುಗಳಲ್ಲಿ ಓದುತ್ತಿರುವ ಕನಿಷ್ಠ 18,000 ವಿದ್ಯಾರ್ಥಿಗಳು ಫೆಬ್ರವರಿಯಲ್ಲಿ ಭಾರತಕ್ಕೆ ಮರಳಿದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *