‘ಸಲಾರ್’ ಚಿತ್ರಕ್ಕೂ ‘ಕೆಜಿಎಫ್ 2’ಗೂ ಇದೆ ನಂಟು: ತಲೆಕೆಡಿಸಿಕೊಂಡ ಫ್ಯಾನ್ಸ್

Public TV
3 Min Read

ಇಂದು ಬೆಳ್ಳಂಬೆಳಗ್ಗೆ ಸಲಾರ್ ಸಿನಿಮಾದ ಟೀಸರ್ (Salaar) ರಿಲೀಸ್ ಆಗಿದೆ. ಟೀಸರ್ ಬಗ್ಗೆ ಹಲವರು ಹಲವು ರೀತಿಯಲ್ಲಿ ವಿಶ್ಲೇಷಣೆ ಮಾಡುತ್ತಿದ್ದಾರೆ. ಟೀಸರ್ ನಲ್ಲಿ ಬಳಕೆಯಾದ ದೃಶ್ಯಗಳಲ್ಲಿ ಕೆಜಿಎಫ್ (KGF) ಸಿನಿಮಾವನ್ನೂ ಹಲವರು ಹುಡುಕಿದ್ದಾರೆ. ಹಾಗಾಗಿ ಫ್ಯಾನ್ಸ್ ತಲೆಕೆಡಿಸಿಕೊಂಡು ತಮ್ಮದೇ ಆದ ರೀತಿಯಲ್ಲಿ ಕಥೆ ಕಟ್ಟುತ್ತಿದ್ದಾರೆ.

ಬೆಳಗ್ಗೆ ಬಿಡುಗಡೆಯಾದ ಸಲಾರ್ ಟೀಸರ್ ನಲ್ಲಿ ಕೆಜಿಎಫ್ ಸಿನಿಮಾದ ಕೋಲಾರ್ ಗೋಲ್ಡ್ ಫಿಲ್ಡನ್ ಮೂನಿಂಗ್ ಒಳಗಿನ ಸಾಮ್ರಾಜ್ಯವನ್ನು ತರುವ ಪ್ರಯತ್ನ ನಡೆದಿದೆಯಾ ಎನ್ನುವ ಅನುಮಾನ ಮೂಡಿಸಿದೆ. ಕೆಜಿಎಫ್ ಕಥೆಯಲ್ಲಿ ಬರುವ ಬಂಗಾರದ ಕಣಜಗಳ ಗೇಟ್ ಗಳು ಸಲಾರ್ ನಲ್ಲಿ ಎಂಟ್ರಿ ಪಡೆದಿವೆ. ಕೆಲ ನಂಬರ್ ಗಳು ಕೂಡ ಯಥಾವತ್ತಾಗಿ ದಾಖಲಾಗಿವೆ. ಹಾಗಾಗಿ ಕೆಜಿಎಫ್ ಅಧ್ಯಾಯದ ಒಂದಷ್ಟು ಭಾಗವನ್ನು ಸಲಾರ್ ಸಿನಿಮಾದಲ್ಲಿ ಹೇಳಿದ್ದಾರಾ ಎಂದು ಹಲವರು ಪ್ರಶ್ನೆ ಮಾಡಿದ್ದಾರೆ.

ಕೆಜಿಎಫ್’ ಮೂಲಕ ಇಡೀ ದೇಶವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ್ದ ಪ್ರಶಾಂತ್ ನೀಲ್ (Prashant Neel), ಈ ಬಾರಿ ‘ಸಲಾರ್’ ಮೂಲಕ ಇನ್ನೊಂದು ಹೊಸ ಪ್ರಪಂಚವನ್ನೇ ಸೃಷ್ಟಿಸಿದ್ದಾರೆ.  ಭಾರತೀಯ ಚಿತ್ರರಂಗದಲ್ಲಿ ಇದುವರೆಗೂ ಕಂಡುಕೇಳರಿಯದ ಪ್ರಮಾಣದಲ್ಲಿ ಈ ಚಿತ್ರವು ನಿರ್ಮಾಣವಾಗುತ್ತಿದ್ದು, ಹೈದರಾಬಾದ್‌ ನ ರಾಮೋಜಿ ಫಿಲಂ ಸಿಟಿ ಬಳಿ 14 ಅದ್ಭುತ ಸೆಟ್ ಗಳನ್ನು ಈ ಚಿತ್ರಕ್ಕಾಗಿ ನಿರ್ಮಿಸಿ, ಅಲ್ಲಿ ಚಿತ್ರೀಕರಣ ಮಾಡಲಾಗಿದೆ. ಇದನ್ನೂ ಓದಿ:`90′ ಬಿಡಲು ಥಿಯೇಟರ್ ಗೆ ನೂಕು ನುಗ್ಗಲು: ಬಿರಾದರ್ ಗೆ ಥ್ಯಾಂಕ್ಸ್ ಎಂದ ಹೆಣೈಕ್ಳು

ಈ ಚಿತ್ರದ ಕುರಿತು ಮಾತನಾಡುವ ನಿರ್ಮಾಪಕ ವಿಜಯ್ ಕಿರಗಂದೂರು, ‘ಈ ಚಿತ್ರ ಪ್ರಾರಂಭವಾದಾಗಲೇ ನಾವು ಇದು ಯಾವುದೋ ಒಂದು ಭಾಷೆಯ ಅಥವಾ ಪ್ಯಾನ್ ಇಂಡಿಯಾ ಸಿನಿಮಾವಲ್ಲ ಎಂದು ಹೇಳಿದ್ದೆವು. ಇದು ಎಲ್ಲ ಕಡೆ ಸಲ್ಲುವ ಭಾರತೀಯ ಚಿತ್ರವಾಗಬೇಕು ಎಂಬುದು ನಮ್ಮ ಆಸೆ. ಅದರಂತೆ ಈ ಚಿತ್ರ ಮೂಡಿಬಂದಿದ್ದು, ಬರೀ ಭಾರತದಲ್ಲಷ್ಟೇ ಅಲ್ಲ, ಹೊರದೇಶಗಳಲ್ಲೂ ಭಾರತೀಯ ಚಿತ್ರವಾಗಿ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ. ಕನ್ನಡದ ನಿರ್ಮಾಣ ಸಂಸ್ಥೆಯೊಂದು, ಪ್ಯಾನ್ ಇಂಡಿಯಾ ಸ್ಟಾರ್ ಒಬ್ಬರ ಚಿತ್ರವೊಂದನ್ನು ಇಷ್ಟೊಂದು ದೊಡ್ಡ ಮಟ್ಟದಲ್ಲಿ ಮಾಡುತ್ತಿರುವುದು ಹೆಮ್ಮೆಯ ವಿಷಯ. ಕನ್ನಡದ ನಿರ್ಮಾಣ ಸಂಸ್ಥೆ, ನಿರ್ದೇಶಕರು, ತಂತ್ರಜ್ಞರು ಮತ್ತು ಕಲಾವಿದರು, ತೆಲುಗಿನ ಸ್ಟಾರ್ ನಟ ಪ್ರಭಾಸ್, ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್, ತಮಿಳಿನ ಶ್ರುತಿ ಹಾಸನ್ ಹೀಗೆ  ಎಲ್ಲ ಭಾಷೆಯ ಕಲಾವಿದರು ಮತ್ತು ತಂತ್ರಜ್ಞರು ಇಲ್ಲಿದ್ದಾರೆ. ಎಲ್ಲರನ್ನೂ ಸೇರಿಸಿ ಭಾರತೀಯ ಸಿನಿಮಾ ಮಾಡಿದ್ದೇವೆ. ಇವತ್ತು ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರ ಸೆಪ್ಟೆಂಬರ್ 28ಕ್ಕೆ ಜಗತ್ತಿನಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಎನ್ನುತ್ತಾರೆ.

ಸುಮಾರು 400 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ‘ಸಲಾರ್’ ಚಿತ್ರವನ್ನು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ನಿರ್ಮಾಣ ಮಾಡಲಾಗಿದೆ. ವಿದೇಶಗಳಲ್ಲೂ ಚಿತ್ರದ ವಿಎಫ್ಎಕ್ಸ್ ಕೆಲಸ ನಡೆದಿದ್ದು, ಆಕ್ಷನ್ ದೃಶ್ಯಗಳಲ್ಲಿ ಬೇರೆ ದೇಶಗಳಿಂದ ಬಂದ ಹಲವು ನುರಿತ ಸಾಹಸ ಕಲಾವಿದರು ಕೆಲಸ ಮಾಡಿರುವುದು ಈ ಚಿತ್ರದ ವಿಶೇಷತೆಗಳಲ್ಲೊಂದು.

 

ದೊಡ್ಡ ಕ್ಯಾನ್ವಾಸ್ ಅಷ್ಟೇ ಅಲ್ಲ, ದೊಡ್ಡ ತಾರಾಗಣವೂ ಇರುವ ಈ ಚಿತ್ರದಲ್ಲಿ ಪ್ರಭಾಸ್ (Prabhas)ಅವರಿಗೆ ನಾಯಕಿಯಾಗಿ ಶ್ರುತಿ ಹಾಸನ್ ನಟಿಸಿದ್ದು, ಮಿಕ್ಕಂತೆ ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಈಶ್ವರಿ ರಾವ್, ಶ್ರೀಯಾ ರೆಡ್ಡಿ ಮುಂತಾದವರು ನಟಿಸಿದ್ದಾರೆ.  ‘ಕೆಜಿಎಫ್’ ಚಿತ್ರಗಳಿಗೆ ಕೆಲಸ ಮಾಡಿದ ತಾಂತ್ರಿಕ ತಂಡವೇ ಈ ಚಿತ್ರಕ್ಕೂ ಕೆಲಸ ಮಾಡಿದ್ದು, ರವಿ ಬಸ್ರೂರು ಅವರ ಸಂಗೀತ, ಭುವನ್ ಗೌಡ ಛಾಯಾಗ್ರಹಣ, ಶಿವಕುಮಾರ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ‘ಸಲಾರ್ ಪಾರ್ಟ್ 1: ಸೀಸ್ ಫೈರ್ ಚಿತ್ರವು ಸೆಪ್ಟೆಂಬರ್ 28ರಂದು ಐದು ಭಾಷೆಗಳಲ್ಲಿ ಏಕಕಾಲಕ್ಕೆ ಜಗತ್ತಿನಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್