ಚಾನಲ್‌, ನನ್ನ ನಡುವೆ ಯಾವುದೇ ಘರ್ಷಣೆ ಆಗಿಲ್ಲ: ವದಂತಿಗಳಿಗೆ ಸುದೀಪ್‌ ಸ್ಪಷ್ಟನೆ

Public TV
2 Min Read

– ಕಲರ್ಸ್‌ ಕನ್ನಡ ಜೊತೆಗೆ ನನ್ನ ಬಾಂಧವ್ಯ ಚೆನ್ನಾಗಿದೆ ಎಂದ ಕಿಚ್ಚ

ಬಿಗ್‌ಬಾಸ್‌ (Bigg Boss Kannada 11) ನಿರೂಪಣೆಗೆ ವಿದಾಯ ಹೇಳಿದ್ದ ವಿಚಾರವಾಗಿ ಹಬ್ಬರುವ ವದಂತಿಗಳಿಗೆ ನಟ ಕಿಚ್ಚ ಸುದೀಪ್‌ (Kichcha Sudeepa) ಪ್ರತಿಕ್ರಿಯಿಸಿದ್ದಾರೆ. ಚಾನಲ್‌ ಮತ್ತು ನನ್ನ ನಡುವೆ ಯಾವುದೇ ಘರ್ಷಣೆ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಾಕಿರುವ ಸುದೀಪ್‌, ನನ್ನ ನಿರ್ಧಾರದ ನಂತರ ನೀವು ತೋರಿಸಿದ ಪ್ರೀತಿ-ಬೆಂಬಲಕ್ಕೆ ಧನ್ಯವಾದ. ಚಾನಲ್ ಹಾಗೂ ನನ್ನ ನಡುವೆ ಯಾವುದೇ ಘರ್ಷಣೆ ಆಗಿಲ್ಲ. ಈ ಬಗ್ಗೆ ಬರ್ತಿರೋ ವೀಡಿಯೋಗಳು, ಪ್ರತಿಕ್ರಿಯೆಗಳೆಲ್ಲಾ ಆಧಾರ ರಹಿತ. ನನಗೆ ಅಗೌರವ ಆಗಿದೆ ಎಂಬ ಪದವನ್ನ ಇದಕ್ಕೆ ಸೇರಿಸೋದು ತಪ್ಪು ಎಂದಿರುವ ನಟ ವದಂತಿಗಳನ್ನು ಹರಡದಂತೆ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ದರ್ಶನ್ ಇಂದೇ ಹೈಕೋರ್ಟ್ ಮೊರೆ ಹೋಗ್ತಾರಾ? – ಅರ್ಜಿ ಸಲ್ಲಿಸಿದ್ರೆ ಮುಂದೇನು?

ಈ ಸಮಸ್ಯೆಯ ಸುತ್ತಲಿನ ಯಾವುದೇ ಊಹೆಗಳು ಆಧಾರ ರಹಿತ. ಕಲರ್ಸ್ ಜೊತೆಗೆ ನನ್ನ ಬಾಂಧವ್ಯ ಚೆನ್ನಾಗಿದೆ. ನಮ್ಮ ನಡುವೆ ಏನೂ ಆಗಿಲ್ಲ. ಬಿಗ್‌ಬಾಸ್ ಡೈರೆಕ್ಟರ್ ಪ್ರಕಾಶ್ ಬಹಳ ಟ್ಯಾಲೆಂಟೆಡ್. ಅವರು ಯಾವಾಗಲೂ ನನ್ನ ಗೌರವದಿಂದ ನಡೆಸಿಕೊಳ್ತಾರೆ. ನಾನು ಅವರ ಬಗ್ಗೆ ಆಳವಾದ ಗೌರವ ಹೊಂದಿದ್ದೇನೆ ಎಂದು ಸುದೀಪ್ ತಿಳಿಸಿದ್ದಾರೆ.

ನಾನು ಕೆಲಸ ಮಾಡ್ತಿರೋ ತಂಡದ ಬಗ್ಗೆ ಅನಗತ್ಯ ಆರೋಪಗಳನ್ನ ಆನಂದಿಸಲಾರೆ.‌ ಹೀಗಾಗಿ, ಇದು ನನ್ನ ಪ್ರತಿಕ್ರಿಯೆ ಆಗಿದೆ ಎಂದು ಸುದೀಪ್‌ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಉಪ್ಪಿ ಅಣ್ಣನ ಮಗ ನಿರಂಜನ್‌ಗೆ ಅರ್ಜುನ್ ಸರ್ಜಾ ಆ್ಯಕ್ಷನ್ ಕಟ್

Share This Article