ನಾಯಕತ್ವದಲ್ಲಿ ಗೊಂದಲವಿಲ್ಲ: ಸಿಎಂಗೆ ಶಾಸಕರ ಬೆಂಬಲವಿದೆ, ಹಾಗಂತ ಡಿಕೆಶಿಗೆ ಬೆಂಬಲ ಇಲ್ಲ ಅಂತ ಅಲ್ಲ: ಎಂ.ಬಿ.ಪಾಟೀಲ್

Public TV
1 Min Read

ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವರು ನಾನೇ ಸಿಎಂ ಎಂದು ಹೇಳಿದ್ದಾರೆ, ಅದರಲ್ಲಿ ತಪ್ಪೇನಿದೆ. ಸಿಎಂ ಆಗಿ ಮುಂದುವರಿಯುತ್ತಾರೆ ಅಂತ ಹೈಕಮಾಂಡ್ ಅನಾವಶ್ಯಕವಾಗಿ ಏಕೆ ಹೇಳುತ್ತೆ? ಎಂದು ಸಚಿವ ಎಂ.ಬಿ.ಪಾಟೀಲ್ (M.B. Patil) ಹೇಳಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಡಿಕೆಶಿಗೆ (D.K Shivakumar) ಶಾಸಕರ ಬೆಂಬಲ ಇಲ್ಲ ಅಂತ ಸಿದ್ದರಾಮಯ್ಯ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಈಗ ಸಿದ್ದರಾಮಯ್ಯ ಅವರಿಗೆ ಶಾಸಕರ ಬೆಂಬಲ ಇದೆ. ಹಾಗಂತ ಡಿಕೆಶಿ ಅವರಿಗೆ ಶಾಸಕರ ಬೆಂಬಲ ಇಲ್ಲ ಅಂತ ಅರ್ಥ ಅಲ್ಲ. ಇದೆಲ್ಲ ಗಣನೆಗೆ ಬರಲ್ಲ, ನಮ್ಮದು ಹೈಕಮಾಂಡ್ ಪಕ್ಷ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಇದನ್ನೂ ಓದಿ: ದೇವನಹಳ್ಳಿ ಭೂಸ್ವಾಧೀನ ಬಿಕ್ಕಟ್ಟು: ಮಂಗಳವಾರ ಸಿಎಂ ಸಿದ್ದರಾಮಯ್ಯ ಅಂತಿಮ ತೀರ್ಮಾನ

ರಾಜ್ಯ ಕಾಂಗ್ರೆಸ್‌ (Congress)  ಸರ್ಕಾರದಲ್ಲಿ ನಾಯಕತ್ವದ ಗೊಂದಲವೇನೂ ಇಲ್ಲ. ಪಕ್ಷದಲ್ಲಿ ರಾಜ್ಯ ಉಸ್ತುವಾರಿಯಾಗಿರುವ ರಣದೀಪ್‌ ಸುರ್ಜೇವಾಲಾ ಅವರು ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ನಮ್ಮ ಪಕ್ಷದ ಶಾಸಕರ ಅಭಿಪ್ರಾಯ ಕೇಳಿದ್ದಾರೆ. ಅದರಲ್ಲಿ ತಪ್ಪೇನೂ ಇಲ್ಲ. ಕೊನೆಗೂ ದುಡ್ಡು ಕೊಡುವುದು ಮುಖ್ಯಮಂತ್ರಿಗಳೇ ತಾನೇ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ (BJP) ನಮ್ಮ ಐವತ್ತರವತ್ತು ಶಾಸಕರ ಮೇಲೆ ಕಣ್ಣಿಟ್ಟು, ಏಜೆಂಟರನ್ನು ಕಳಿಸುತ್ತಿದೆ ಎಂದು ನಮ್ಮ ಪಕ್ಷದ ಶಾಸಕರೇ ಹೇಳಿದ್ದಾರೆ. ಆದರೆ, ನಮ್ಮಲ್ಲಿ 140ಕ್ಕೂ ಹೆಚ್ಚು ಶಾಸಕರಿದ್ದಾರೆ. ಪಕ್ಷಾಂತರ ಆಗಬೇಕೆಂದರೆ 80-90 ಶಾಸಕರು ಹೋಗಬೇಕಾಗುತ್ತದೆ. ಈಗ ಯಾರೂ ಅಷ್ಟು ಮೂರ್ಖರಿಲ್ಲ. ಹಿಂದೇನೋ 17 ಶಾಸಕರು ಬಿಜೆಪಿಗೆ ಹೋದರು. ಈಗ ಅದೆಲ್ಲ ನಡೆಯುವುದಿಲ್ಲ. ವಾಸ್ತವವಾಗಿ ಬಿಜೆಪಿ-ಜೆಡಿಎಸ್‌ ಕೂಟದ 18-20 ಶಾಸಕರು ಕಾಂಗ್ರೆಸ್‌ ಬಾಗಿಲು ಬಡಿಯುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗಾಳಿ ಆಂಜನೇಯ ದೇವಸ್ಥಾನ | ಅವ್ಯವಹಾರ ನಡೆದ್ರೆ 5 ವರ್ಷ ವಶಕ್ಕೆ ಪಡೆಯಲು ಅವಕಾಶವಿದೆ:ರಾಮಲಿಂಗಾ ರೆಡ್ಡಿ ಸಮರ್ಥನೆ

Share This Article